Advertisement

ಜನರ ದುಡ್ಡಿನಲ್ಲಿ ನಿರ್ಮಿಸಿದ ಮಾರುಕಟ್ಟೆ ಸದ್ಬಳಕೆಯಾಗಿಲ್ಲ

10:28 PM Oct 26, 2019 | Team Udayavani |

ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಉರ್ವ ಮಾರುಕಟ್ಟೆ ಉದ್ಘಾಟನೆಯಾಗಿ ಒಂದು ವರ್ಷ ಸಮೀಪಿಸುತ್ತಿದ್ದರೂ, ಅದರ ಸದ್ಬಳಕೆಯಾಗದಿರು ವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Advertisement

ಮಾರ್ಕೆಟ್‌ಗಳನ್ನು ಸಮಗ್ರ ಅಭಿವೃದ್ಧಿಪಡಿಸುವ ಸಲುವಾಗಿ ಮನಪಾ 2008ರಲ್ಲಿ 35 ವರ್ಷ ಗುತ್ತಿಗೆ ಅವಧಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ಕ್ಕೆ ಹಸ್ತಾಂತರಿಸಿತ್ತು. 2016ರಲ್ಲಿ ಮುಡದಿಂದ ಉರ್ವ ಮಾರ್ಕೆಟ್‌ಗೆ 12.29 ಕೋ.ರೂ. ವೆಚ್ಚದಲ್ಲಿ ಹೊಸ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ 2019ರ ಜನವರಿಯಲ್ಲಿ ಉದ್ಘಾಟನೆಗೊಂಡಿತ್ತು.

ಮಾರುಕಟ್ಟೆ ಕಾಮಗಾರಿ ಆರಂಭಿಸುವ ಮುನ್ನ ಹಳೆ ಮಾರ್ಕೆಟ್‌ ಬಳಿ ತಾತ್ಕಾಲಿಕ ಮಾರ್ಕೆಟ್‌ ನಿರ್ಮಿಸಿ ಮೀನು ಮಾರಾಟ, ಇತರ ಅಂಗಡಿಗಳನ್ನು ಅಲ್ಲಿಗೆ ಸ್ಥಳಾಂತರಿಸಲಾಗಿತ್ತು. ಈಗ ಸುಸಜ್ಜಿತ ಮಾರ್ಕೆಟ್‌ ಕಟ್ಟಡ ನಿರ್ಮಾಣವಾಗಿದ್ದರೂ ಮಳಿಗೆಗಳನ್ನು ಹಂಚಿಕೆ ಮಾಡದ ಕಾರಣ ತಾತ್ಕಾಲಿಕ ಮಾರ್ಕೆಟ್‌ನಲ್ಲೇ ವ್ಯಾಪಾರ ಮುಂದುವರಿದಿದೆ. ತಾತ್ಕಾಲಿಕ ಮಾರುಕಟ್ಟೆಯಲ್ಲಿ ಹಲವು ಸಮಸ್ಯೆಗಳಿದ್ದರೂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಮಾರುಕಟ್ಟೆ ಸದ್ಬಳಕೆ ವಿಚಾರದಲ್ಲಿ ಗಮನಹರಿಸಬೇಕು.

-  ನವೀನ್‌ ಭಟ್‌, ಇಳಂತಿಲ

Advertisement

Udayavani is now on Telegram. Click here to join our channel and stay updated with the latest news.

Next