Advertisement
ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೆ.17ರಂದು ಬೆಳಗ್ಗೆ 8:30 ಗಂಟೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾಲಾರ್ಪಣೆ ಮಾಡುವರು.ನಂತರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಡಿಎಆರ್) ಮೈದಾನದಲ್ಲಿ ಬೆಳಗ್ಗೆ 9:00ಗಂಟೆಗೆ ಹೈದ್ರಾಬಾದ ಕರ್ನಾಟಕ ವಿಮೋಚನೆ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಂಡ ಸ್ವಾತಂತ್ರ್ಯಯೋಧರಿಗೆ ಸನ್ಮಾನಿಸಲಾಗುವುದು. ನಂತರ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹೈದ್ರಾ ಬಾದ ಕರ್ನಾಟಕ ವಿಮೋಚನೆಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಜಿಲ್ಲಾ ಕಚೇರಿಗಳಲ್ಲಿ ಧ್ವಜಾರೋಹಣ
ನೆರವೇರಿಸಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಪೊಲೀಸ ಪರೇಡ್ ಮೈದಾನದಲ್ಲಿ ನಡೆಯುವ ವಿಮೋಚನಾ ದಿನಾಚರಣೆಯ ಧ್ವಜಾರೋಹಣ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಯಿತು. ಹಾಜರಾಗದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಸಮಾರಂಭದ ಸೂಕ್ತ ವೇದಿಕೆ ನಿರ್ಮಾಣ ಹಾಗೂ ಸಮಾರಂಭಕ್ಕೆ ಆಗಮಿಸುವ ಹೈಕೋರ್ಟ್ ನ್ಯಾಯಾಧೀಶರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ, ಹೈದ್ರಾಬಾದ ಕರ್ನಾಟಕ ವಿಮೋಚನಾ ಚಳವಳಿ ಹೋರಾಟಗಾರರಿಗೆ, ಗಣ್ಯವ್ಯಕ್ತಿಗಳಿಗೆ, ಪತ್ರಕರ್ತರಿಗೆ ಹಾಗೂ ಅಧಿಕಾರಿಗಳಿಗೆ ಬಿಸಿಲು ಬೀಳದಂತೆ, ಮಳೆ ಬರುವ ಸಂಭವ ಇರುವುದರಿಂದ ವಾಟರ್ ಪ್ರೂಫ್ ಶ್ಯಾಮಿಯಾನ, ಆಸನಗಳ ವ್ಯವಸ್ಥೆ ಮತ್ತು ಸಮರ್ಪಕ ವಿದ್ಯುತ್ ಮತ್ತು ಧ್ವನಿವರ್ಧಕ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.
Related Articles
Advertisement
ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಜಿಲ್ಲಾ ಹೆಚ್ಚುವರಿ ಪೊಲೀಸ ಅಧೀಕ್ಷಕ ಜಯಪ್ರಕಾಶ, ವಿಧಾನ ಪರಿಷತ್ ಮಾಜಿ ಶಾಸಕ ಶಶೀಲ ಜಿ.ನಮೋಶಿ, ಹೈದ್ರಾಬಾದ ಕರ್ನಾಟಕ ವಿಮೋಚನಾ ಸಮಿತಿ ಸದಸ್ಯ ಲಕ್ಷ್ಮಣ ದಸ್ತಿ, ಸಾಹಿತಿ ಪ್ರೊ| ವಸಂತ ಕುಷ್ಠಗಿ, ಗಣ್ಯರಾದ ಶಿವರಾಜ ಪಾಟೀಲ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.