ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ವಿಸ್ತೃತ ಯೋಜನ ವರದಿಗೆ ಆದಷ್ಟು ಬೇಗ ಒಪ್ಪಿಗೆ ನೀಡುವಂತೆ ಕೇಂದ್ರ ಜಲ ಶಕ್ತಿ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ಕೇಂದ್ರ ಸಚಿವರ ಭೇಟಿಯ ಅನಂತರ ಮಾಧ್ಯಮ ಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ ಮಾಡಲಾಗಿದ್ದು, ಮೇಕೆದಾಟು ಯೋಜನೆಗೆ ಆದಷ್ಟು ಬೇಗ ಒಪ್ಪಿಗೆ ನೀಡುವಂತೆ ಮನವಿ ಮಾಡಲಾಗಿದೆ.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀ ಯ ಯೋಜನೆ ಎಂದು ಪರಿಗಣಿಸಲು ಆದಷ್ಟು ಶೀಘ್ರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ನೀಡು ವಂತೆ ಮನವಿ ಮಾಡಲಾಗಿದೆ.
ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವಂತೆ ಟ್ರಿಬ್ಯೂನಲ್ ನೀಡಿರುವ ಆದೇಶವನ್ನು ನೋಟಿಫಿಕೇಶನ್ ಮಾಡುವಂತೆ ಮತ್ತೂಂದು ಬಾರಿ ಕೇಂದ್ರ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಾಗಿದೆ.
ಜಿಎಸ್‌ಟಿಗೂ ಒತ್ತಾಯ
ಜಿಎಸ್‌ಟಿ ಸಭೆಯಲ್ಲಿ ರಾಜ್ಯದ ಬಾಕಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯ ಮಾಡಲಾಗಿದೆ ಎಂದು ಹೇಳಿದರು.