ನಮ್ಮೆಲ್ಲರ ಕರ್ತವ್ಯ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಹೇಳಿದರು.
Advertisement
ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಚಿತ್ರದುರ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ 72ನೇ ಸ್ವಾತಂತ್ರ್ಯಾದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಬೋಸ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಪಿನ್ ಚಂದ್ರಪಾಲ್, ಬಾಲಗಂಗಾಧರ ತಿಲಕ್, ದಾದಾಬಾಯಿ
ನವರೋಜಿ, ಗೋಪಾಲಕೃಷ್ಣ ಗೋಖಲೆ ಹಾಗೂ ಸ್ವಾತಂತ್ರ್ಯಾಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ವೀರ ಯೋಧರ ಸ್ಮರಣೆ ಅಗತ್ಯ ಎಂದರು.
Related Articles
ಒನಕೆ ಓಬವ್ವ ಹಾಗೂ ಇದೇ ಜಿಲ್ಲೆಯವರಾದ ಎಸ್. ನಿಜಲಿಂಗಪ್ಪ, ದುಮ್ಮಿ ಮುರಿಗೆಪ್ಪ, ಮುಲ್ಕಾ ಗೋವಿಂದ ರೆಡ್ಡಿ, ಕೆ. ಹನುಮಂತಪ್ಪ ಹಾಗೂ ಇನ್ನೂ ಅನೇಕ ಮಹಾನ್ ನಾಯಕರನ್ನು ಸ್ಮರಿಸಬೇಕಾಗಿದೆ ಎಂದು ತಿಳಿಸಿದರು.
Advertisement
ರಾಜ್ಯ ಸರ್ಕಾರ ಕಾರ್ಮಿಕರು, ರೈತರು, ಬಡವರು ಹಾಗೂ ದೀನದಲಿತರ, ಮಹಿಳೆಯರ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಈ ವರ್ಗಗಳ ಅಭಿವೃದ್ಧಿಗಾಗಿ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳ ಸಹಕಾರ ಅಗತ್ಯ ಎಂದರು. ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಸಂಸದ ಬಿ.ಎನ್. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ°, ಜಿಲ್ಲಾ ಪಂಚಾಯತ್ ಸಿಇಒ ಪಿ.ಎನ್. ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿ ಮೊದಲಾದವರು ಪಾಲ್ಗೊಂಡಿದ್ದರು. ಸ್ವಾತಂತ್ರ್ಯಾ ಯೋಧರು ಹಾಗೂ ಅವರ ಅವಲಂಬಿತರು, ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.