ಚಿಕ್ಕಬಳ್ಳಾಪುರ: ನಗರದಲ್ಲಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಹಾಗೂ ಉಸ್ತುವಾರಿ ಸಚಿವ ಡಾ.ಸುಧಾಕರ್, ಕೋವಿಡ್ ನಿಯಂತ್ರಣ ಬಗ್ಗೆ ಜಿಲ್ಲೆಯಲ್ಲಿ ಸೂಕ್ತ ಕ್ರಮ ಕೈಗೊಂಡು ಜನರಿಗೆ ಸಮರ್ಪಕ ಚಿಕಿತ್ಸೆನೀಡಬೇಕು. ಕೊರೊನಾ ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡಬೇಕು, ಆಸ್ಪತ್ರೆಗಳಲ್ಲಿ ಸ್ಪತ್ಛತೆಗೆ ಹೆಚ್ಚು ಒತ್ತುನೀಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಪ್ರತಿಯೊಬ್ಬ ಕೋವಿಡ್ ಸೋಂಕಿತನಿಗೂ ಆರೋಗ್ಯ ಕಿಟ್‌ವಿತರಿಸಬೇಕು. ಅನಗತ್ಯವಾಗಿ ರೆಮ್‌ಡಿಸಿವಿಯರ್ ಅನ್ನು ರೋಗಿಗಳಿಗೆ ನೀಡಬಾರದು, ತಜ್ಞ ವೈದ್ಯರಶಿಫಾರಸ್ಸಿನಂತೆ ಔಷಧ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿಗೆ ಸೂಚಿಸಿದರು.
ಈಗಾಗಲೇ ಸರ್ಕಾರದ ನಿರ್ದೇಶನದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಕೋವಿಡ್‌ನಿಯಂತ್ರಣಕ್ಕಾಗಿ ಪ್ರತಿ ಹಳ್ಳಿಗಳಲ್ಲೂ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ, ಪರಿಣಾಮಕಾರಿಯಾಗಿ ಕೋವಿಡ್‌ನಿಯಂತ್ರಣ ಕ್ರಮ ಕೈಗೊಂಡಿದ್ದಾರೆ. ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮುನ್ನೆಚ್ಚರಿಕೆಯಾಗಿ ಪ್ರತಿ ಸೋಂಕಿತರಮನೆಗೆ ಭೇಟಿ ಕೊಟ್ಟು ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಧಿಕಾರಿ ಆರ್.ಲತಾ, ಜಿಪಂ ಸಿಇಒ ಪಿ.ಶಿವಶಂಕರ್, ಎಸಿ ಎ.ಎನ್.ರಘುನಂದನ್, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾಆರೋಗ್ಯಾಧಿ ಕಾರಿ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿ ಕಾರಿ ಡಾ.ಯಲ್ಲಾರಮೇಶ್‌ಬಾಬು, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ರಮೇಶ್, ಜೈನ್ ಆಸ್ಪತ್ರೆ ಆಡಳಿತ ಮಂಡಳಿ ಸದಸ್ಯರು ಇದ್ದರು.