Advertisement

ಸಚಿವರ ಹೇಳಿಕೆಗಳೇ ಗಲಭೆಗೆ ಕುಮ್ಮಕ್ಕು

11:27 PM Dec 20, 2019 | Lakshmi GovindaRaj |

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಅಮಾಯಕ ಯುವಕರಿಬ್ಬರು ಪೊಲೀಸರ ಗೋಲಿಬಾರ್‌ಗೆ ಬಲಿಯಾಗಿದ್ದು ದುರದೃಷ್ಟಕರ. ಸರ್ಕಾರದ ಸಚಿವರೇ ಗಲಭೆಗೆ ಕುಮ್ಮಕ್ಕು ಕೊಡುವಂತಹ ಹೇಳಿಕೆ ನೀಡಿ ಜನರನ್ನು ಪ್ರಚೋದಿಸುತ್ತಿರುವುದು ಖಂಡನಾರ್ಹ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾನು ಕೇರಳದಲ್ಲಿ ಚಿಕಿತ್ಸೆಯ ಲ್ಲಿದ್ದೇನೆ. ಪಕ್ಷದ ನಾಯಕ ರಾದ ಬಿ.ಎಂ. ಫ‌ರೂಕ್‌ ಅವರು ಮಂಗಳೂರಿ ನಲ್ಲಿದ್ದು, ಸಂಕಷ್ಟಕ್ಕೊಳ ಗಾದವರಿಗೆ ನೆರವಾಗುತ್ತಿದ್ದಾರೆ. ಅಲ್ಲಿಂದ ಎಲ್ಲ ಮಾಹಿತಿಗಳನ್ನು ನನಗೆ ತಿಳಿಸಿದ್ದಾರೆ. ಸರ್ಕಾರ ಕೂಡ ಶಾಂತಿ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಎನ್‌ಆರ್‌ಸಿ ಮತ್ತು ಸಿಎಎ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಇರುವುದನ್ನು ನಿವಾರಿಸುವುದು ಸರ್ಕಾರದ ಕರ್ತವ್ಯ.

ಅದನ್ನು ಅಧಿಕಾರಿಗಳ ಮೂಲಕ ಮಾಡುವುದನ್ನು ಬಿಟ್ಟು ಪೊಲೀಸ್‌ ಬಲ ಪ್ರಯೋ ಗಿಸಿ, ಹೆದರಿಸಿ, ಸೆಕ್ಷನ್‌ ವಿಧಿಸಿ ನಾಗರಿಕರ ಪ್ರತಿಭಟನೆಯ ಹಕ್ಕು ಕಸಿದುಕೊಳ್ಳಬೇಡಿ. ಸರ್ಕಾರ ಇರುವುದು ಪ್ರಜೆಗಳ ರಕ್ಷಣೆಗೆ. ಕಾನೂನು ಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡಿ. ಶಾಂತಿ ಕದಡುವವರನ್ನು ಗುರುತಿಸಿ ಬಂಧಿಸಿ. ಆದರೆ, ಅಮಾಯಕರನ್ನು ಕೊಲ್ಲಬೇಡಿ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next