Advertisement
ದಕ್ಷಿಣ ಭಾರತದಲ್ಲಿ ಬಿಜೆಪಿ ಬಲಾಡ್ಯವಾಗಿರುವ ಏಕೈಕ ರಾಜ್ಯ ಕರ್ನಾಟವಾಗಲಿದ್ದು, ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕವನ್ನು ಮತ್ತೆ ಪಕ್ಷದ ತೆಕ್ಕೆಗೆ ಸೆಳೆದುಕೊಳ್ಳಲು ರಾಜ್ಯಕ್ಕೆ ಹೆಚ್ಚು ಒತ್ತು ನೀಡಲಿದ್ದಾರೆ. ಅಮಿತ್ ಶಾ ಅವರು ಶೀಘ್ರದಲ್ಲೇ ರಾಜ್ಯಕ್ಕೆ ಬಂದು ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರಗಳನ್ನು ಹೆಣೆಯಲಿದ್ದಾರೆ. ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಜ. 28ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆ ಕಾರ್ಯಕ್ರಮದ ಮೂಲಕವೇ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಸಚಿವರು ಸೇರಿದಂತೆ ಹಲವು ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು, ಪಕ್ಷದ ರಾಷ್ಟ್ರೀಯ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಕಾಂಗ್ರೆಸ್ ಮುಕ್ತಗೊಳಿಸುವ ತಮ್ಮ ಯೋಜನೆಗೆ ಕರ್ನಾಟವನ್ನು ಬಿಜೆಪಿ ಕಾರ್ಯಕ್ಷೇತ್ರ ಮಾಡಿಕೊಳ್ಳಲಿದೆ.