Advertisement

ಕಾಂಗ್ರೆಸ್‌ನಿಂದ ಅತ್ಯಂತ ಕಳಪೆ ಪ್ರಣಾಳಿಕೆ ಬಿಡುಗಡೆ: ಶೋಭಾ ಕರಂದ್ಲಾಜೆ

07:00 AM Apr 30, 2018 | Team Udayavani |

ಬೆಂಗಳೂರು: ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌  ಈ ಚುನಾವಣೆಗೆ ಅತ್ಯಂತ ಕಳಪೆ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಂಸದೆ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

Advertisement

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆವರು, ಕಾಂಗ್ರೆಸ್‌ ಪ್ರಣಾಳಿಕೆ ಗಂಭೀರವಾಗಿ ಪರಿಗಣಿಸಿಲ್ಲ ಎಂಬುದಕ್ಕೆ ಅದರಲ್ಲಿರುವ ತಪ್ಪುಗಳೇ ಸಾಕ್ಷಿ. ಇದರಲ್ಲೂ ಉಡಾಫೆತನ ತೋರಲಾಗಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೀವು ಪ್ರಣಾಳಿಕೆ ಓದಿದ್ದಾರಾ ಎಂದು ಪ್ರಶ್ನಿಸಿದ ಅವರು, ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ನೀವೇ ಪ್ರಣಾಳಿಕೆ ಓದಿಲ್ಲ. ಆದರಲ್ಲಿರುವ ತಪ್ಪುಗಳ ಬಗ್ಗೆ ಒಂದೇ ಒಂದು ಮಾತು  ಆಡಿಲ್ಲ. ಇದು ನೀವು ಪ್ರಣಾಳಿಕೆಗೆ ಎಷ್ಟು ಮಹತ್ವ ಕೊಟ್ಟಿದ್ದೀರಿ ಎಂಬುದಕ್ಕೆ ಸಾಕ್ಷಿ ಎಂದು ದೂರಿದರು.

ಕಾಂಗ್ರೆಸ್‌ ಪ್ರಣಾಳಿಕೆ ಸಿದ್ಧಪಡಿಸುವ ಕೆಲಸವನ್ನು ಪಿಆರ್‌ ಕಂಪನಿಗೆ ಪ್ರಣಾಳಿಕೆ ಸಿದ್ಧಪಡಿಸುವ ಹೊರಗುತ್ತಿಗೆ ಕೊಟ್ಟು ಮಾಡಿಸಲಾಗಿದೆ ಎಂದು ಆರೋಪಿಸಿದ ಅವರು, ಪಿಆರ್‌ ಕಂಪನಿ ಸಿದ್ಧಪಡಿಸಿದ ಪ್ರಣಾಳಿಕೆ ಕಣ್ಮುಚ್ಚಿ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು ಎಂದರು.

ಕಳೆದ ಒಂದು ವರ್ಷದಿಂದ ಪಿಆರ್‌ ಕಂಪನಿ ಮೂಲಕ ಪ್ರಚಾರ ಪಡೆಯುತ್ತಿದ್ದ ಸರ್ಕಾರ ಪ್ರಣಾಳಿಕೆಯಂತಹ ಮಹತ್ವದ ವಿಚಾರದ ಬಗ್ಗೆಯೂ ಉಡಾಫೆಯಾಗಿ ವರ್ತಿಸಿದೆ. ಕನ್ನಡಕ್ಕೆ ಅವಮಾನ ಮಾಡಲಾಗಿದೆ. ಯಾವ ಕಾಂಗ್ರೆಸ್‌ ನಾಯಕರು ಪ್ರಣಾಳಿಕೆ ಓದಿಲ್ಲ. ಓದಿದ್ದರೆ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲಿ ಇಷ್ಟು ತಪ್ಪುಗಳು ಇರುತ್ತಿದ್ದವೇ ಎಂದು ಪ್ರಶ್ನಿಸಿದರು.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನರೇಂದ್ರಮೋದಿ, ಅಮಿತ್‌ ಶಾ, ಯಡಿಯೂರಪ್ಪ ಅವರನ್ನು ತೆಗಳುವುದೇ ಕೆಲಸವಾಗಿಸದೆ. ಅಸಹ್ಯ, ವ್ಯಂಗ್ಯ, ಸಣ್ಣ ಮಾತುಗಳನ್ನು ಆಡಿ ಚಪ್ಪಾಳೆ ಗಿಟ್ಟಿಸಿಕೊಳ್ಳುವ ಗೀಳು ಅವರಿಗೆ  ಎಂದು ಟೀಕಿಸಿದರು.

ಮೋದಿ, ಯೋಗಿ ಪ್ರವಾಸ
ಪ್ರಧಾನಿ ನರೇಂದ್ರ ಮೋದಿ ಮೇ 1 ರಂದು ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೇ 3 ಮತ್ತು 4 ರಂದು ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಮೇ 1 ರಂದು ಆಗಮಿಸಲಿರುವ ನರೇಂದ್ರಮೋದಿಯವರು ಚಾಮರಾಜನಗರ, ಉಡುಪಿ, ಚಿಕ್ಕೋಡಿಯಲ್ಲಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಮೇ 3 ರಂದು ಆಗಮಿಸಲಿರುವ ಆದಿತ್ಯನಾಥ್‌ ಶಿರಸಿ, ಸಾಗರ, ಶೃಂಗೇರಿ, ಬಾಳೆಹೊನ್ನೂರು ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಂತರ ಮೇ 4 ರಂದು ಬೈಂದೂರು, ಭಟ್ಕಳ, ಕಾಪು, ಬಂಟ್ವಾಳ, ಸುರತ್ಕಲ್‌ನಲ್ಲಿ ನಡೆಯಲಿರುವ ಪ್ರಚಾರ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು. ಬಿಜೆಪಿ ರಾಷ್ಟೀಯ ಅಧ್ಯಕ್ಷ ಅಮಿತ್‌ ಶಾ ಅವರು ಸಹ ನಿರಂತರವಾಗಿ ರಾಜ್ಯ ಪ್ರವಾಸದಲ್ಲಿದ್ದು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿದ್ದಾರೆ. ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ನಾಯಕರು ಬಿಜೆಪಿ ಅಭ್ಯರ್ಥಿಗಳನ್ನು ಹುರಿದುಂಬಿಸಿ ಕಾರ್ಯಕರ್ತರು ಹಾಗೂ ಮುಖಂvರಿಗೆ ಉತ್ಸಾಹ ತುಂಬಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದರು.

ಮುಂದಿನ 10-12 ದಿನಗಳಲ್ಲಿ ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ,  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ನಿರಂತರವಾಗಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.ಬಿಜೆಪಿ ಸಹ ವಕ್ತಾರ ಅನ್ವರ್‌ ಮಾನಪ್ಪಾಡಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next