Advertisement
ಯಾರಲ್ಲೂ ಹೇಳದೆ ಬೆಂಗಳೂರಿನಿಂದ ಬಂದ ಮಹಿಳೆ ಕೊಕ್ಕಡದ ರಫೀಕ್ ಬೋಳದಬೈಲು ಹಾಗೂ ಅಝೀಜ್ ಬೆಂಗಳೂರಿನಿಂದ ಬಸ್ಸಿನಲ್ಲಿ ಧರ್ಮಸ್ಥಳಕ್ಕೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ತಮ್ಮ ಪಕ್ಕದ ಸೀಟಿನಲ್ಲಿದ್ದ ಮಹಿಳೆ ಹಾಗೂ ಮಕ್ಕಳು ಅಳುತ್ತಾ ಇರುವುದನ್ನು ಸೂಕ್ಷ್ಮವಾಗಿ ಗಮನಿಸಿದ್ದರು. ಮಹಿಳೆ ಯಾರೊಂದಿಗೋ ಮೊಬೈಲ್‌ನಲ್ಲಿ ಅಳುತ್ತಾ, ತಾನು ಮಕ್ಕಳೊಂದಿಗೆ ಸಾಯಲು ಹೊರಟಿದ್ದಾಗಿ ಹೇಳುತ್ತಿದ್ದುದನ್ನು ಗಮನಿಸಿದ ರಫೀಕ್ ಹಾಗೂ ಅಝೀಜ್ ಆಕೆಯನ್ನು ಮಾತನಾಡಿಸಿದರು. ಆಗ ಆಕೆ ತಾನು ರಾಮನಗರ ನಿವಾಸಿ ಚಂದ್ರಕಲಾ, ಮಕ್ಕಳಾದ ಭಾವನಾ ಹಾಗೂ ವಿದ್ಯಾಶ್ರೀ ಜತೆಗೆ ಗಂಡನ ಹೆತ್ತವರ ಕಿರುಕುಳ ತಡೆಯಲಾರದೆ ಯಾರಲ್ಲೂ ಹೇಳದೆ ಬಂದಿರುವುದಾಗಿ ತಿಳಿಸಿದರು. ಕೊಟ್ಟಿಗೆಹಾರ ಬಳಿ ಬಸ್ಸಿನಿಂದ ಇಳಿದ ಮಹಿಳೆಯನ್ನು ಹಿಂಬಾಲಿಸಿ ಗಮನಿಸುತ್ತಿದ್ದ ಈ ಯುವಕರಿಗೆ ಮಹಿಳೆಯಲ್ಲಿ ಉಳಿದಿರುವ ಹಣ ಕೇವಲ 20 ರೂ. ಎಂದು ತಿಳಿದಾಗ ಉಪಾಹಾರ ಹಾಗೂ ನೀರು ತೆಗೆದುಕೊಟ್ಟಿದ್ದಾರೆ. ಬಳಿಕ ಆಕೆಯ ಪತಿಯ ಮೊಬೈಲ್ ಸಂಖ್ಯೆ ಪಡೆದು ಕರೆ ಮಾಡಿದರು.
Related Articles
ಮನೆಯಲ್ಲಿ ಹಿಂದಿನ ರಾತ್ರಿ ನಡೆದ ಘಟನೆಯಿಂದ ನನ್ನ ಹೆಂಡತಿ, ಮಕ್ಕಳನ್ನು ಕರೆದುಕೊಂಡು ಹೋಗಿದ್ದು, ಎಲ್ಲಿ ಹೋಗಿದ್ದಾರೆ ಅನ್ನುವ ಮಾಹಿತಿಯೇ ನಮಗೆ ಇರಲಿಲ್ಲ. ಕೊಕ್ಕಡದ ಯುವಕರ ಪ್ರಸಂಗಾವಧಾನತೆಯಿಂದ ನಾನು ಹೆಂಡತಿ ಮಕ್ಕಳನ್ನು ಮರಳಿ ಪಡೆಯುವಂತಾಯಿತು. ನಮ್ಮನ್ನು ರಕ್ಷಿಸಿದ ಯುವಕರಿಗೆ ದೇವರು ಒಳ್ಳೆಯದು ಮಾಡಲಿ.
ಶಿವಾಜಿ ರಾವ್, ಮಹಿಳೆಯ ಪತಿ
Advertisement