Advertisement

ರಕ್ಷಣೆಗಾಗಿ ಪೊಲೀಸರ ಮೊರೆಹೊದ ಸಿಎಂ ಸೊಸೆ

11:58 AM Jun 18, 2017 | |

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆಗೆ  ರಕ್ಷಣೆ ಬೇಕಂತೆ!  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ,ಸ್ಮಿತಾ ರಾಕೇಶ್‌ ತಮಗೆ ರಕ್ಷಣೆ ಕೋರಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಮಲ್ಲೇಶ್ವರಂ ಠಾಣೆ ಇನ್ಸಪೆಕ್ಟರ್‌ ಅವರಿಗೆ ಮನವಿ ಸಲ್ಲಿಸಿರುವ ಸ್ಮಿತಾ, ದುಷ್ಕರ್ಮಿಗಳ ವರ್ತನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ.

Advertisement

ಅವರ ಕೃತ್ಯಗಳಿಂದ ತಮಗೆ ಭಯವಾಗುತ್ತಿದೆ. ಉದ್ದೇಶಪೂರ್ವಕವಾಗಿ ಕೆಲವು ಕಿಡಿಗೇಡಿಗಳು ನಮ್ಮ ಮನೆ ಆವರಣದಲ್ಲಿ ಮಧ್ಯರಾತ್ರಿ ನಡೆಸುತ್ತಿರುವ ದಾಂಧಲೆಗಳು ನೆಮ್ಮದಿ ಹಾಳುಮಾಡಿವೆ. ಈಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕ್ರಮ ತಗೆದುಕೊಳ್ಳುವಂತೆ ಕೋರಿದ್ದಾರೆ. 

ಜೂ.15ರಂದು ತಡರಾತ್ರಿ 2 ಗಂಟೆ ಸುಮಾರಿಗೆ ಮಲ್ಲೇಶ್ವರಂನ 18ನೇ ಕ್ರಾಸ್‌ನಲ್ಲಿರುವ ತಮ್ಮ ಮನೆಗೆ ದುಷ್ಕರ್ಮಿಗಳು ನುಗ್ಗಲು ಯತ್ನಿಸಿದ್ದು, ಮನೆಯ ಕಾಂಪೌಂಡ್‌ನ‌ಲ್ಲಿರುವ ಲೈಟ್‌ಗಳನ್ನು ಧ್ವಂಸಗೊಳಿಸಿದ್ದಾರೆ. ಮನೆ ಆವರಣದಲ್ಲಿರುವ ಹಲಸಿನ ಮರದ ಕಾಯಿಗಳನ್ನು ಕೀಳಲು ಯತ್ನಿಸಿದ್ದಾರೆ. ಈ ಹಿಂದೆಯೂ ಎರಡು ಬಾರಿ ಇದೇ ರೀತಿಯ ಘಟನೆ ನಡೆದಿತ್ತು.

ಆಗ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದೆ. ಆದರೂ ದುಷ್ಕರ್ಮಿಗಳ ಕೃತ್ಯ ನಿಂತಿಲ್ಲ. ಇದೀಗ ಮತ್ತೆ ಮನೆ ಮುಂದೆ ದಾಂಧಲೆ ನಡೆಸಿದ್ದಾರೆ. ಇದು ಕಳ್ಳರು ಮಾಡುತ್ತಿರುವ ಕೃತ್ಯ ಅಲ್ಲ ಅನಿಸುತ್ತದೆ. ಮನೆಯಲ್ಲಿ  ತಾಯಿ ಮತ್ತು ಮಕ್ಕಳ ಜತೆ ನೆಲೆಸಿದ್ದೇನೆ. ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ರಕ್ಷಣೆ ನೀಡುವಂತೆ ಸ್ಮಿತಾ ರಾಕೇಶ್‌ ಪೊಲೀಸರನ್ನು ಕೋರಿದ್ದಾರೆ. 

ವಿಷಯ ತಿಳಿದ ತಕ್ಷಣ ಮಲ್ಲೇಶ್ವರ ಠಾಣೆ ಪೊಲೀಸರು ಸ್ಮಿತಾ ರಾಕೇಶ್‌ ಅವರ ಮನಗೆ ಭೇಟಿ ನೀಡಿ ದುಷ್ಕರ್ಮಿಗಳ ಕೃತ್ಯದ ಬಗ್ಗೆ ಮಾಹಿತಿ ಪಡೆದು ಸೂಕ್ತ ಭದ್ರತೆ ಒದಗಿಸಿದ್ದಾರೆ. ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next