Advertisement

ನಲಪಾಡ್‌ ಜಾಮೀನು ಅರ್ಜಿ ವಿಚಾರಣೆ ನಾಳೆ

10:46 AM Mar 08, 2018 | Team Udayavani |

ಬೆಂಗಳೂರು: ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮಾರ್ಚ್‌ 9ಕ್ಕೆ ಮುಂದೂಡಿದೆ. ಈ ಅರ್ಜಿ ವಿಚಾರಣೆ ಬುಧವಾರ ನ್ಯಾ. ಶ್ರೀನಿವಾಸ ಹರೀಶ್‌ಕುಮಾರ್‌ ಅವರಿದ್ದ ಏಕಸದಸ್ಯ ಪೀಠದ ಮುಂದೆ ಬಂದಿತ್ತು. ಆದರೆ, ವಿಶೇಷ ಅಭಿಯೋಜಕ ಶ್ಯಾಮಸುಂದರ್‌, ಅರ್ಜಿದಾರರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲವಕಾಶ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

Advertisement

ಜೊತೆಗೆ ಪ್ರಾಸಿಕ್ಯೂಶನ್‌ಗೆ ನೆರವಾಗಲು ಇಚ್ಛಿಸಿ ವಕೀಲರಾದ ಎ. ಅಸ್ಲಾಂ ಪಾಷಾ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಹೀಗಾಗಿ, ಮಧ್ಯಂತರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ವಿಶೇಷ ಅಭಿಯೋಜಕರಿಗೆ ಸೂಚಿಸಿ ವಿಚಾರಣೆಯನ್ನು ಮಾ. 9ಕ್ಕೆ ಮುಂದೂಡಿತು

Advertisement

Udayavani is now on Telegram. Click here to join our channel and stay updated with the latest news.

Next