Advertisement

ಮಾದಕ ವ್ಯಸನ ನಿಯಂತ್ರಿಸುವಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಪರಿಣಾಮಕಾರಿ

07:09 PM Oct 11, 2020 | Suhan S |

ರಾಯಚೂರು: ಮಾದಕ ವ್ಯಸನ ನಿಯಂತ್ರಿಸುವ ನಿಟ್ಟಿನಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅತ್ಯಂತ ಪರಿಣಾಮಕಾರಿಯಾಗಿದೆ. ಕಾಯ್ದೆಯನ್ನು ಪೊಲೀಸರು ಸಮಗ್ರವಾಗಿ ಅಧ್ಯಯನ ಮಾಡಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುಸ್ತಫ್‌ ಹುಸೇನ್‌ ಹೇಳಿದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಮಲು ಪದಾರ್ಥಗಳು ಮಾನವನ ಬದುಕಿಗೆ ಮಾರಕವಾಗಿವೆ. ಜಿಲ್ಲೆಯಲ್ಲಿ ಇತ್ತೀಚೆಗೆ ಗಾಂಜಾ ಬಳಕೆ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಾಗ ಸಂಬಂ ಧಿಸಿದ ಕಾಯ್ದೆ ಅರಿತು ಪ್ರಕರಣ ದಾಖಲಿಸದ ಕಾರಣ ಆರೋಪಿಗೆ ಸೂಕ್ತ ಶಿಕ್ಷೆ ವಿಧಿಸಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಕಾಯ್ದೆಯ ಎಲ್ಲ ಸೆಕ್ಷನ್‌ಗಳನ್ನು ತಿಳಿಯಬೇಕಿದೆ ಎಂದರು.

ಗಾಂಜಾ ಬೆಳೆಯುವ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೂ ದಂಡ ವಿಧಿಸಬಹುದು. ಆದಕಾರಣ ಪೊಲೀಸರು ಗಾಂಜಾ ಪ್ರಕರಣಕ್ಕೆ ಸಂಬಂಧಿ ಸಿದಂತೆ ವಿಚಾರಣೆ ನಡೆಸುವ ಸಂದರ್ಭದಲ್ಲಿಅಪರಾಧಿಗೆ ತಕ್ಕ ಶಿಕ್ಷೆ ವಿ ಧಿಸಲು ಎನ್‌ಡಿಪಿಎಸ್‌ ಕಾಯ್ದೆ ಅನುಸಾರವಾಗಿ ಪ್ರಕರಣ ದಾಖಸಿಕೊಳ್ಳಬೇಕು ಮತ್ತು ತನಿಖೆ ಸಮರ್ಪಕವಾಗಿ ನಡೆಸಲು ಅಗತ್ಯ ದಾಖಲೆ ಹಾಗೂ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಆಗ ಆರೋಪಿಯ ತಪ್ಪಿಗೆ ಅನುಗುಣವಾಗಿ ತೀರ್ಪು ನೀಡಲು ಸಾಧ್ಯವಾಗುತ್ತದೆ ಎಂದರು.

ಎಸ್‌ಪಿ ಪ್ರಕಾಶ ನಿಕ್ಕಂ ಮಾತನಾಡಿ, ಜಿಲ್ಲೆಯಲ್ಲಿ ಗಾಂಜಾ ಮಾರುವುದು, ಬೆಳೆಯುವುದು ಕಂಡು ಬಂದಿದೆ. ಈವರೆಗೂ 50 ಆರೋಪಿಗಳನ್ನು ಬಂಧಿಸಿ, 100 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. 2ನೇ ಹೆಚ್ಚುವರಿ ನ್ಯಾಯಾಧೀಶರಾದ ನರಸಿಂಹಮೂರ್ತಿ, ಒಂದನೇ ಹೆಚ್ಚುವರಿ ನ್ಯಾಯಾಧೀಶರಾದ ಅವಿನಾಶ ಗಾಳಿ ಉಪನ್ಯಾಸ ನೀಡಿದರು. ಜಿಲ್ಲಾ ಅಭಿಯೋಜಕ ಟಿ.ಸುದರ್ಶನ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಶ್ರೀಹರಿಬಾಬು ಸೇರಿದಂತೆ ಇತರರಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ಎಂ.ಸಿ.ನಾಡಗೌಡ ಸ್ವಾಗತಿಸಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next