Advertisement

ಜ್ಞಾನ ವಿಕಾಸಕ್ಕೆ ಗ್ರಂಥಾಲಯಗಳ ಅಗತ್ಯ: ಬಚ್ಚೇಗೌಡ

09:46 PM Aug 16, 2019 | Team Udayavani |

ಚಿಕ್ಕಬಳ್ಳಾಪುರ: ಶಾಲೆಗಳಲ್ಲಿ ಓದುವ ಪಠ್ಯ ಪುಸ್ತಕಗಳ ಜೊತೆಗೆ ಮಕ್ಕಳು ಗ್ರಂಥಾಲಯಗಳಲ್ಲಿ ಸಿಗುವ ಸಾಮಾನ್ಯ ವಿಷಯಗಳ ಕುರಿತಾದ ಪುಸ್ತಕಗಳನ್ನು ಓದುವುದರಿಂದ ಜ್ಞಾನ ವಿಕಾಸವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮಕ್ಕಳ ಗ್ರಂಥಾಲಯವನ್ನು ಜಿಲ್ಲೆಯ ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಂಸದ ಬಿ.ಎನ್‌.ಬಚ್ಚೇಗೌಡ ತಿಳಿಸಿದರು.

Advertisement

ಮಕ್ಕಳಿಗೆ ಜ್ಞಾನ ವೃದ್ಧಿ: ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಪಕ್ಕ ಹಳೆ ಕಟ್ಟಡವನ್ನು ನವೀಕರಿಸಿ ಸ್ಥಾಪಿಸಲಾಗಿರುವ ನೂತನ ಜಿಲ್ಲಾ ಮಕ್ಕಳ ಗ್ರಂಥಾಲವನ್ನು ಜಿಲ್ಲೆಗೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ, ಸಿ.ಎನ್‌.ಆರ್‌.ರಾವ್‌ ಇಬ್ಬರು ಭಾರತ ರತ್ನರು ಜನಿಸಿದಂತ ಹೆಮ್ಮೆಯ ಜಿಲ್ಲೆ ನಮ್ಮದು. ಮಕ್ಕಳ ಜ್ಞಾನದ ವೃದ್ಧಿಗಾಗಿ ಮಕ್ಕಳ ಗ್ರಂಥಾಲಯವನ್ನು ತೆರೆಯಲಾಗಿದ್ದು, ಜಿಲ್ಲಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.

5 ಲಕ್ಷ ರೂ. ಅನುದಾನ: ಮಕ್ಕಳ ಗ್ರಂಥಾಲಯದಲ್ಲಿ ಸಮಾಜ, ವಿಜ್ಞಾನ, ಇತಿಹಾಸ, ಸಾಮಾನ್ಯ ಜ್ಞಾನ ಸೇರಿದಂತೆ ವಿವಿಧ ಪುಸ್ತಕಗಳು ಲಭ್ಯವಿದೆ. ಮಕ್ಕಳು ಗ್ರಂಥಾಲಯಕ್ಕೆ ಭೇಟಿ ನೀಡಿ, ವಿವಿಧ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ವೃದ್ಧಿಸಿಕೊಂಡು ದೇಶದ ಉತ್ತಮ ಪ್ರಜೆಯಾಗಬೇಕು. ಗ್ರಂಥಾಲಯ ಅಭಿವೃದ್ಧಿಗಾಗಿ ಸಂಸದರ ನಿಧಿಯಿಂದ ಐದು ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ಮಾತನಾಡಿ, ದೇಶದ ಪ್ರಥಮ ಪ್ರಧಾನಿ ನೆಹರು ಅವರು ಜಿಲ್ಲೆಗೆ ಭೇಟಿ ನೀಡಿ ಗ್ರಂಥಾಲಯವನ್ನು ಉದ್ಘಾಟಿಸಿದ್ದಾರೆ. ಇದು ಹೆಮ್ಮೆಯ ಸಂಗತಿ. ಪಾರಂಪರಿಕ ಕಟ್ಟಡವಾದ ಇದನ್ನು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ನವೀಕರಣಗೊಳಿಸಿ ಮಕ್ಕಳ ಗ್ರಂಥಾಲಯವನ್ನಾಗಿಸಲಾಗಿದೆ. ಮಕ್ಕಳು ಇದರ ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎಚ್‌.ವಿ.ಮಂಜುನಾಥ್‌, ಸಿಇಒ ಫೌಜಿಯಾ ತರನ್ನುಮ್‌, ಅಪರ ಜಿಲ್ಲಾಧಿಕಾರಿ ಆರತಿ, ಸಾವರ್ಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್‌ ಕುಮಾರ್‌ ಹೊಸಮನಿ, ಜಿಲ್ಲಾ ನಗರಾಭಿವೃದ್ಧಿ ಕೋಶಾದ ಯೋಜನಾ ನಿರ್ದೇಶಕಿ ರೇಣುಕಾ, ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ, ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಶಂಕರಪ್ಪ ಎಂ. ಇದ್ದರು.

Advertisement

ಬಾಲ ನಂದಿ ತ್ರೈಮಾಸಿಕ ಪತ್ರಿಕೆ ಬಿಡುಗಡೆ: ಇದಕ್ಕೂ ಮೊದಲು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಹೊರ ತರಲಾದ ಜಿಲ್ಲೆಯ ಮಕ್ಕಳು ಬರೆದಿರುವ ಕವಿತೆ, ಕಥೆ, ಲೇಖನ ಹಾಗೂ ಜಿಲ್ಲೆಯ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಬಾಲ ನಂದಿ ತ್ತೈಮಾಸಿಕ ಪತ್ರಿಕೆಯನ್ನು ಸಂಸದ ಬಿ.ಎನ್‌.ಬಚ್ಚೇಗೌಡ, ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next