Advertisement

ಜನಸಂಖ್ಯೆ ನಿಯಂತ್ರಣ ಅವಶ್ಯ: ರಾಮಚಂದ್ರನ್‌

02:12 PM Jul 12, 2019 | Team Udayavani |

ಬಾಗಲಕೋಟೆ: ಎಲ್ಲ ಮೂಲ ಸೌಕರ್ಯಗಳು ಜನಸಾಮಾನ್ಯರಿಗೆ ಸರಳವಾಗಿ ದೊರಕಿ ಸಾಮಾಜಿಕವಾಗಿ, ಆರ್ಥಿಕವಾಗಿ, ಮಾನಸಿಕವಾಗಿ ಪ್ರತಿಯೊಬ್ಬರು ಸದೃಡರಾಗಬೇಕಾಗಿದರೆ ಜನಸಂಖ್ಯೆ ನಿಯಂತ್ರಣ ಅವಶ್ಯ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಹೇಳಿದರು.

Advertisement

ನವನಗರದ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ   ವಿಶ್ವ ಜನಸಂಖ್ಯಾ ದಿನ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಳದಿಂದ ಕುಟುಂಬದಿಂದ ದೇಶದವರೆಗೆ ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯಯುತ ಸುಖೀ ಕುಟುಂಬಕ್ಕಾಗಿ ಚಿಕ್ಕ ಸಂಸಾರ ಅಗತ್ಯವಿದೆ ಎಂದರು.

ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಹಸಿರು ನಿಶಾನೆ ತೋರುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಜಾಗೃತಿ ಜಾಥಾ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನವನಗರದ ನಾನಾ ಕಡೆ ಸಂಚರಿಸಿ ಕೊನೆಗೆ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು. ಜಾಥಾ ಉದ್ದಕ್ಕೂ ವಿದ್ಯಾರ್ಥಿಗಳು ಜಾಗೃತಿ ಘೋಷಣೆ ಕೂಗಿದರು.

ಜಾಥಾದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಅನಂತ ದೇಸಾಯಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಪ್ರಕಾಶ ಬಿರಾದಾರ, ಕುಟುಂಬ ಕಲ್ಯಾಣಾಧಿಕಾರಿ ಪಟ್ಟಣಶೆಟ್ಟಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ|ಜಯಶ್ರೀ ಎಮ್ಮಿ, ಡಾ|ಬಿ.ಜಿ. ಹುಬ್ಬಳ್ಳಿ, ಡಾ|ಪಿ.ಎ. ಹಿತ್ನಳ್ಳಿ, ಡಾ|ವಿಜಯ ಕಂಠಿ ಹಾಗೂ ಎಎನ್‌ಎಂ ತರಬೇತಿ ಕೇಂದ್ರದ ಪ್ರಾಚಾರ್ಯ ಸುಮಿತ್ರಾ ಪಾಲ್ಗೊಂಡಿದ್ದರು.

Advertisement

ನಂತರ ಆರೋಗ್ಯ ಇಲಾಖೆಯ ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಪವಾಡೆಪ್ಪ ಬಿ.ಸಿ ಮಾತನಾಡಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ|ಬಿ.ಜಿ. ಹುಬ್ಬಳ್ಳಿ ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಜನಸಂಖ್ಯೆ ನಿಯಂತ್ರಣ ಮತ್ತು ಸ್ಥಿರತೆ ಅವಶ್ಯಕವಾಗಿದೆ. ಈ ಆಚರಣೆ ಪ್ರತಿದಿನವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next