ಹೆಸರುವಾಸಿ ಪ್ರವಾಸಿತಾಣ ಮಾಂದಲ್ ಪಟ್ಟಿ- ದೇವಸ್ತೂರು-ಮಡಿಕೇರಿ ಮಾರ್ಗ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.
Advertisement
ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯ ಕಾಲೂರು, ಮಾಂದಲ್‌ಪಟ್ಟಿ ಗ್ರಾಮಗಳು ಹಿಂದೆ ಕುಗ್ರಾಮವಾ ಗಿತ್ತು, ಈಗ ರಸ್ತೆ, ವಿದ್ಯುತ್ ಸಂಪರ್ಕ ಮತ್ತಿತರ ಮೂಲ ಸೌಲಭ್ಯ ಪಡೆದು ಹಂತ ಹಂತವಾಗಿ ಅಭಿವೃದ್ಧಿ ಹೊಂದುತ್ತಿವೆ. ಆ ದಿಸೆಯಲ್ಲಿ ನೂತನ ವಾಗಿ ಬಸ್ ಸಂಪರ್ಕವನ್ನು ಮಾಂದಲ್‌ಪಟ್ಟಿಗೆ ಕಲ್ಪಿಸಲಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರಯೋಜನವಾಗಲಿ ಎಂದು ಅವರು ಹೇಳಿದರು.
ಮಾಂದಲ್ ಪಟ್ಟಿಯಿಂದ ಹಮ್ಮಿಯಾಲ 6 ಕಿ.ಮೀ. ವರೆಗೂ ಬಸ್ ಸಂಪರ್ಕ ಕಲ್ಪಿಸಬೇಕಿದೆ. ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಜಿ. ಬೋಪಯ್ಯ ತಿಳಿಸಿದರು. ಸದ್ಯ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಯಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ಹಲವು ರಸ್ತೆ ಗುಂಡಿ ಬಿದ್ದಿದ್ದು, ಇದನ್ನು ಸರಿಪಡಿಸಲು ಸಂಬಂಧ ಪಟ್ಟವರ ಜತೆ ಚರ್ಚಿಸಲಾಗುವುದು. ಜತೆಗೆ ವಿವಿಧ ಯೋಜನೆಯಡಿ ಅನುದಾನ ಬಿಡುಗಡೆಗೆ ಪ್ರಯತ್ನಿ ಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
Related Articles
Advertisement
ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಮಾತನಾಡಿ, ಜನರ ಅನುಕೂಲಕ್ಕಾಗಿ ಬಸ್ ಸಂಪರ್ಕ ಕಲ್ಪಿಸ ಲಾಗಿದೆ. ಗ್ರಾಮಸ್ಥರು, ಜನಪ್ರತಿನಿಧಿಗಳು ಎಲ್ಲರ ಸಹಕಾರದಿಂದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಬಸ್ ವೇಳಾಪಟ್ಟಿ ಇಂತಿದೆ;
ಕೆ.ಎಸ್.ಆರ್.ಸಿ. ಮಡಿಕೇರಿ ಘಟಕದ ಇನ್ ಸ್ಪೆಕ್ಟರ್ ಈರಪ್ಪ ಅವರು ಮಾತನಾಡಿ ಮಾಂದಲ್ ಪಟ್ಟಿಗೆ ಬಸ್ ಸಂಪರ್ಕವು ಪ್ರತಿನಿತ್ಯ ಮಡಿಕೇರಿಯಿಂದ ಬೆಳಗ್ಗೆ 7 ಗಂಟೆಗೆ ಹೊರಟು, ಬೆಳಗ್ಗೆ 8.15 ಗಂಟೆಗೆ ಮಾಂದಲ್ ಪಟ್ಟಿ ತಲುಪಲಿದೆ.
ಬಳಿಕ ಬೆಳಗ್ಗೆ 8.30 ಗಂಟೆಗೆ ಮಾಂದಲ್‌ಪಟ್ಟಿ ಯಿಂದ ಮಡಿಕೇರಿಗೆ ತೆರಳಲಿದೆ. ಹಾಗೆಯೇ ಸಂಜೆ 4 ಗಂಟೆಗೆ ಮಡಿಕೇರಿಯಿಂದ ಹೊರಟು ಸಂಜೆ 5.30 ಗಂಟೆಗೆ ಮಾಂದಲ್ ಪಟ್ಟಿ ತಲುಪಿ ವಾಪಸ್ ಮಡಿಕೇರಿಗೆ ಹೋಗಲಿದೆ ಎಂದು ಅವರು ಮಾಹಿತಿ ನೀಡಿದರು.
ಜಿ.ಪಂ.ಸದಸ್ಯರಾದ ಯಲದಾಳು ಪದ್ಮಾವತಿ, ತಾ.ಪಂ.ಸದಸ್ಯರಾದ ಮುದ್ದಂಡ ರಾಯ್ ತಮ್ಮಯ್ಯ, ಗಾಳಿಬೀಡು ಗ್ರಾ.ಪಂ. ಅಧ್ಯಕ್ಷರಾದ ಸುಭಾಷ್ ಸೋಮಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ.ಎಸ್. ತಮ್ಮಯ್ಯ, ಎ.ಟಿ. ಮಾದಪ್ಪ, ಸಿ.ಎಂ. ತಿಮ್ಮಯ್ಯ, ಪುಷ್ಪ ಪೂಣಚ್ಚ, ಕನ್ನಂಡ ಪೆಮ್ಮಯ್ಯ, ಕಾಲೂರು ನಾಗೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.