ಮುಂಬಯಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಮತ್ತು ಸಾಧಕರಿಗೆ ಸಮ್ಮಾನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮಾ. 17ರಂದು ಅಪರಾಹ್ನ 4 ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಬಂಟರ ಸಂಘ ಅಧ್ಯಕ್ಷ ಪದ್ಮನಾಭ ಪಯ್ಯಡೆ ಇವರು ದೀಪಪ್ರಜ್ವಲಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಶ್ರೀ ದೇವಿ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಎ. ಸದಾನಂದ ಶೆಟ್ಟಿ ಅವರು ಉಪಸ್ಥಿತರಿದ್ದರು. ವಿಶ್ವ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರುಗಳಾದ ತೋನ್ಸೆ ಆನಂದ ಶೆಟ್ಟಿ, ಶಶಿಕಿರಣ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಬಂಜಾರ, ಕೆ. ಎಂ. ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಸಮಾರಂಭವು ಜರಗಿತು.
ಬೋಂಬೆ ಬಂಟ್ಸ್ ಅಸೋಶಿಯೇಶನ್ ಅಧ್ಯಕ್ಷ ಸುಭಾಷ್ ಬಿ. ಶೆಟ್ಟಿ, ಸಮಾಜ ಸೇವಕ ಮೀರಾ-ಡಹಾಣು ಬಂಟ್ಸ್ ಗೌರವಾಧ್ಯಕ್ಷ ಡಾ| ಶಂಕರ್ ಶೆಟ್ಟಿ ವಿರಾರ್, ಡಾ| ಪ್ರಭಾಕರ ಶೆಟ್ಟಿ, ಬಿ., ಕಾರ್ಯಕ್ರಮ ಸಂಯೋಜಕ ರತ್ನಾಕರ ಶೆಟ್ಟಿ ಮುಂಡ್ಕೂರು, ರಂಜನಿ ಸುಧಾಕರ ಹೆಗ್ಡೆ, ಚುನಾವಣಾಧಿಕಾರಿ ಪ್ರಥ್ವಿರಾಜ್ ಶೆಟ್ಟಿ, ಬಂಟ್ಸ್ ಸಂಘ ಪುಣೆ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು, ರಘುರಾಮ ಶೆಟ್ಟಿ ಬೆಳಗಾವಿ, ಬಂಟ್ಸ್ ಸಂಘ ಬೆಳ್ತಂಗಡಿ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ, ಅಹ್ಮದಾಬಾದ್ ಬಂಟ್ಸ್ ಇದರ ರಿತೇಶ್ ಹೆಗ್ಡೆ, ಗುರುಪುರ ಬಂಟ್ಸ್ ರಾಜ್‌ಕುಮಾರ್ ಶೆಟ್ಟಿ, ಪಿಂಪ್ರಿ-ಚಿಂಚಾÌಡ್ ಬಂಟ್ಸ್ ಸಂಘದ ಅಧ್ಯಕ್ಷ ವಿಜಯ ಶೆಟ್ಟಿ, ಮುಲುಂಡ್ ಬಂಟ್ಸ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಉಪೇಂದ್ರ ಶೆಟ್ಟಿ ಬೆಳಗಾವಿ. ದೇವಿಚರಣ್ ಶೆಟ್ಟಿ, ಥಾಣೆ ಬಂಟ್ಸ್ ಅಧ್ಯಕ್ಷ ಕುಶಲ್ ಸಿ. ಭಂಡಾರಿ, ರಾಜ್‌ಕುಮಾರ್ ಶೆಟ್ಟಿ, ರಂಜನಿ ಸುಧಾಕರ ಹೆಗ್ಡೆ, ತೋನ್ಸೆ ಮನೋಹರ್ ಶೆಟ್ಟಿ, ರವೀಂದ್ರ ಶೆಟ್ಟಿ, ಚಂದ್ರಶೇಖರ ರೈ, ಸತೀಶ್ ಎನ್. ಶೆಟ್ಟಿ, ಕರುಣಾಕರ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಯಂತ್ ಪಕ್ಕಳ ನಲ್ಯಗುತ್ತು ಪ್ರಕಾಶ್ ಶೆಟ್ಟಿ ಇನ್ನಿತರ ಗಣ್ಯರು ಹಾಗೂ ವಿವಿಧ ಬಂಟ ಸಂಘಗಳನೆಗಳ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಸಮಾರಂಭದ ಸ್ವಾಗತ ಸಮಿತಿಯ ಮೇಲ್ವಿಚಾರಕ ಹಾಗೂ ಬಂಟರ ಸಂಘ ಪ್ರಾದೇಶಿಕ ಸಮಿತಿಗಳ ಸಮನ್ವಯಕರಾದ ಇಂದ್ರಾಳಿ ದಿವಾಕರ ಶೆಟ್ಟಿ, ಡಾ| ಪ್ರಭಾಕರ ಶೆಟ್ಟಿ ಬಿ., ಸಂಘದ ಒಂಭತ್ತು ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರುಗಳು, ಅತಿಥಿ ಸತ್ಕಾರದ ನೇತೃತ್ವವನ್ನು ವಹಿಸಿರುವ ಗೌತಮ್ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ, ದಿವಾಕರ ಶೆಟ್ಟಿ ಕುರ್ಲಾ, ಕ್ಯಾಟರಿಂಗ್ ಮೇಲ್ವಿಚಾರಕರಾದ ಬಂಟರ ಸಂಘದ ಕ್ಯಾಟರಿಂಗ್ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ನೇತೃತ್ವವನ್ನು ವಹಿಸಿರುವ ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈ, ವೇದಿಕೆಯ ವ್ಯವಸ್ಥೆ ಮಾಡಿದ ದಿವಾಕರ ಶೆಟ್ಟಿ ಹಾಗೂ ವೇಣುಗೋಪಾಲ್ ಶೆಟ್ಟಿ, ಪೂಜಾ ಸಮಿತಿಯ ಸಂಚಾಲಕ ಸಂಘದ ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಅಶೋಕ್ ಪಕ್ಕಳ ಮೊದಲಾದವರ ನೇತೃತ್ವದಲ್ಲಿ ಸಮಾರಂಭವು ಜರಗಿತು. ಸಮಾರಂಭದ ಪ್ರಾಯೋಜಕರಾಗಿ ವಿವಿಧ ಕ್ಷೇತ್ರಗಳ ಗಣ್ಯರುಗಳಾದ ಐಕಳ ಹರೀಶ್ ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಡಾ| ವಿರಾರ್ ಶಂಕರ್ ಶೆಟ್ಟಿ, ಶಶಿಧರ ಶೆಟ್ಟಿ ನಲಸೋಪರ, ಮುಂಡ್ಕೂರು ರತ್ನಾಕರ ಶೆಟ್ಟಿ, ಅಶೋಕ್ ಶೆಟ್ಟಿ ಪೆರ್ಮುದೆ ಅವರು ಸಹಕರಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ವಿವಿಧ ಬಂಟ ಸಂಘ-ಸಂಸ್ಥೆಗಳ ಸದಸ್ಯರಿಂದ ಮತ್ತು ಬಂಟರ ಸಂಘದ ಒಂಭತ್ತು ಪ್ರಾದೇಶಿಕ ಸಮಿತಿಗಳಿಂದ ಸಾಂಸ್ಕೃತಿಕ ನೃತ್ಯ ವೈವಿಧ್ಯ ಹಾಗೂ ವಿಠಲ್ ನಾಯ್ಕ ಕಲ್ಲಡ್ಕ ಮತ್ತು ತಂಡದವರಿಂದ ಗೀತ ಸಾಹಿತ್ಯ ಸಂಭ್ರಮ ಇನ್ನಿತರ ವಿನೋದಾವಳಿಗಳು ನಡೆಯಿತು.
ಚಿತ್ರ ವರದಿ: ರೋನ್ಸ್ ಬಂಟ್ವಾಳ