Advertisement
ಯಾರು ಅರ್ಹರು?ಬಿಪಿಎಲ್ ಪಡಿತರ ಚೀಟಿ ಹೊಂದಲು ಪ್ರತಿ ತಿಂಗಳು 150 ಯುನಿಟ್‌ಗಳಿಗಿಂತಲೂ ಹೆಚ್ಚಿನ ವಿದ್ಯುತ್ ಬಳಕೆ ಮಾಡುವ ಕುಟುಂಬಗಳು ಅರ್ಜಿ ಸಲ್ಲಿಸುವಂತಿಲ್ಲ. ನಗರದಲ್ಲಿ 860 ರೂ., ಗ್ರಾಮೀಣ ಪ್ರದೇಶದಲ್ಲಿ 836 ರೂ.ಗಿಂತ ಕಡಿಮೆ ವಿದ್ಯುತ್ ಬಿಲ್ಲು ಕಟ್ಟುವವರು ಬಿಪಿಎಲ್‌ಗೆ ಅರ್ಜಿ ಸಲ್ಲಿಸಲು ಅರ್ಹರು. ನಾಲ್ಕು ಚಕ್ರದ ವಾಹನ ಹೊಂದಿದ ಕುಟುಂಬಗಳು (ಜೀವನೋಪಾಯಕ್ಕೆ ಸ್ವತಃ ಓಡಿ
ಸುವ ಒಂದು ವಾಣಿಜ್ಯ ವಾಹನ, ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಹೊಂದಿದ ಕುಟುಂಬ ಹೊರತು ಪಡಿಸಿ) ಬಿಪಿಎಲ್‌ಗೆ ಅರ್ಜಿ ಸಲ್ಲಿಸು ವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣ ಭೂಮಿ, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಸ್ವಂತವಾಗಿ ಹೊಂದಿದ ಕುಟುಂಬಗಳು ಬಿಪಿಎಲ್‌ಗೆ ಅರ್ಜಿ ಸಲ್ಲಿಸುವಂತಿಲ್ಲ. ಸರಕಾರಿ ನೌಕರರು, ಅರೆ ಸರಕಾರಿ ನೌಕರರು, ನಿಗಮ ಮಂಡಳಿಗಳ ಸಹಿತ ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್ ಪಾವತಿಸುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವಂತಿಲ್ಲ.