Advertisement

ಹರ್ಷ ಹತ್ಯೆ ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ : ಸಿಎಂ ಬೊಮ್ಮಾಯಿ

03:45 PM Feb 23, 2022 | Team Udayavani |

ಬೆಂಗಳೂರು: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆ ತೀವ್ರವಾಗಿ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ,ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದರು.

ಇದು ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕಾಂಗ್ರೆಸ್ ನವರು ಈ ಹಿಂದೆ ಸರ್ಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ ಎಂದು ತಿರುಗೇಟು ನೀಡಿದರು.

ದೆಹಲಿ ಪ್ರಯಾಣದ ಬಗ್ಗೆ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿ ‘ಸದ್ಯಕ್ಕೆ ದೆಹಲಿಗೆ ಹೋಗುವ ಉದ್ದೇಶ ಇಲ್ಲ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next