Advertisement

ಸಿದ್ದು ಬಂದ ಬಳಿಕ ಮುಂದಿನ ಬೆಳವಣಿಗೆ

06:00 AM Sep 12, 2018 | |

ಬೆಂಗಳೂರು: ವಿದೇಶ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್‌ ಆದ ನಂತರ ರಾಜ್ಯ ರಾಜಕೀಯ ಬೆಳವಣಿಗೆಗಳು ಹೊಸ ತಿರುವು ಪಡೆಯುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹನ್ನೆರಡು ದಿನಗಳ ಯುರೋಪ್‌ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಸೆ. 15ರ ರಾತ್ರಿ ಬೆಂಗಳೂರಿಗೆ ವಾಪಸ್‌ ಆಗಲಿದ್ದು, ಸೆ.16ರ ನಂತರ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Advertisement

ಜಾರಕಿಹೊಳಿ ಸಹೋದರರೂ ಕೂಡ ಸಿದ್ದರಾಮಯ್ಯ ಬರುವವರೆಗೂ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದ್ದು, ಪಕ್ಷ ಹಾಗೂ ಸರ್ಕಾರದಲ್ಲಿ ತಮಗೆ ಆಗುತ್ತಿರುವ ಅನ್ಯಾಯವನ್ನು ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಇದೇ ವೇಳೆ, ತಾವು ವಿದೇಶಕ್ಕೆ ತೆರಳಿದಾಗ ಏನೇ ಬೆಳವಣಿಗೆಯಾದರೂ ತಮ್ಮ ಮೇಲೆ ಅಪವಾದ 
ಬರುತ್ತದೆಂದು ಸಿದ್ದರಾಮಯ್ಯ ಸತೀಶ್‌ ಜಾರಕಿಹೊಳಿಗೆ ಹೇಳಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಸತೀಶ್‌ ಜಾರಕಿಹೊಳಿ ಸಿದ್ದರಾಮಯ್ಯ ಬಂದ ನಂತರ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. 

ಮೈತ್ರಿ ಸರ್ಕಾರ ಅಸ್ಥಿರ ಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಲೇ ಇದ್ದಾರೆ. ಅದಕ್ಕಾಗಿ ಜಾರಕಿಹೊಳಿ ಸಹೋದರರು ಪಕ್ಷ ಬಿಡುತ್ತಾರೆಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ರಮೇಶ್‌ ಜಾರಕಿಹೊಳಿ ಜತೆ ಮಾತನಾಡಿದ್ದೇನೆ.  ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ.
● ಡಾ.ಜಿ. ಪರಮೇಶ್ವರ್‌, ಉಪ ಮುಖ್ಯಮಂತ್ರಿ

ಜಾರಕಿಹೊಳಿ ಸಹೋದರರು ಕಾಂಗ್ರೆಸ್‌ ತೊರೆಯುವುದಿಲ್ಲ. ಬೆಳಗಾವಿಯ ಸಣ್ಣಪುಟ್ಟ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಬಗೆ ಹರಿಸುತ್ತೇವೆ. 
ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅಲ್ಲಿನ ಕೆಲವು ಶಾಸಕರೇ ಪಕ್ಷ ಬಿಡುತ್ತಾರೆ. 

● ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಜಾರಕಿಹೊಳಿ ಸಹೋದರರು ಕಾಂಗ್ರೆಸ್‌ನಲ್ಲಿ ಗಟ್ಟಿಯಾಗಿ ದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ. ತಮ್ಮ ಪಕ್ಷ ಸೇರುತ್ತಾರೆಂದು ಹಗಲು ಕನಸು ಕಾಣುತ್ತಿ ರುವ ಬಿಜೆಪಿ ನಾಯಕರಿಗೆ ನಿರಾಶೆ ಆಗಲಿದೆ. 
● ಎಸ್‌.ಆರ್‌. ಪಾಟೀಲ,
ಮಾಜಿ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next