Advertisement

ಮುಂದಿನ ಎರಡು ದಿನ ಸಾಧಾರಣ ಮಳೆ ಸಾಧ್ಯತೆ

02:13 AM May 03, 2019 | Sriram |

ಬೆಂಗಳೂರು: ಮುಂದಿನ ಎರಡು ದಿನಗಳು ರಾಜ್ಯ ಕೆಲವೆಡೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ಫೋನಿ ಚಂಡಮಾರುತವು ಓಡಿಶಾ ಕಡೆಗೆ ಚಲಿಸಿರುವುದರಿಂದ ರಾಜ್ಯದ ಮೇಲೆ ಹೆಚ್ಚಿನ ಪ್ರಭಾವ ಬೀರುವುದಿಲ್ಲ. ಆದರೂ, ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ತಿಳಿಸಿದರು. ಗುರುವಾರ ಕಲಬುರಗಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ, ಕೊಡಗು ಸೇರಿ ಕೆಲವೆಡೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next