Advertisement
ಎಚ್‌ಐವಿ ಸೋಂಕಿನ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯಿಂದ ತಿಳಿವಳಿಕೆ ಮತ್ತು ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆ ಗಣನೀಯ ಇಳಿಮುಖಕಂಡಿದೆ. ಆರೋಗ್ಯ ಇಲಾಖೆಯ ಅಂಕಿ ಅಂಶದ ಪ್ರಕಾರ ಕಳೆದ 10 ವರ್ಷದ ಹಿಂದೆ ಶೇ.1.48 ರಷ್ಟಿದ್ದ ಸಾಮಾನ್ಯ ಸೋಂಕಿತರ ಪ್ರಮಾಣ ಶೇ.0.45ಕ್ಕೆ ಇಳಿಕೆಯಾಗಿದೆ. ಅದೇ ರೀತಿ, ಶೇ.0.10ರಷ್ಟಿದ್ದ ಗರ್ಭಿಣಿಯರಲ್ಲಿ ಸೋಂಕಿನ ಪ್ರಮಾಣ ಶೇ.0.02ಗೆ ಇಳಿಮುಖಗೊಂಡಿದೆ.
Related Articles
Advertisement
ಆತ್ಮ ಸ್ಥೈರ್ಯ ತುಂಬಬೇಕು
ಎಚ್‌ಐವಿ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬುವುದು ಅತ್ಯಗತ್ಯ. ಎಚ್‌ಐವಿ/ ಏಡ್ಸ್ ಬಗ್ಗೆ ತಪ್ಪು ಕಲ್ಪನೆಗಳಿದ್ದು, ರೋಗಕ್ಕಿಂತ ರೋಗದ ಭಯವೇ ರೋಗಿಯ ಮಾನಸಿಕ ಸ್ಥೈರ್ಯವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಎಚ್‌ಐವಿ ಸೋಂಕಿತರಿರೊಂದಿಗೆ ಸಮಾಲೋಚನೆ ನಡೆಸಿ ಎಆರ್‌ಟಿ ಚಿಕಿತ್ಸೆ ನೀಡಬೇಕು. ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಡಿ. 1ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ’ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಅರಿವು ಮುಖ್ಯ: ಎಚ್‌ಐವಿ/ ಏಡ್ಸ್ ನಿಯಂತ್ರಿಸಲು ಈ ರೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆಯಿಂದ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ಎಚ್‌ಐವಿ ಸೋಂಕು ಇಳಿಮುಖಗೊಳ್ಳುತ್ತಿದೆ. ಎಚ್‌ಐವಿ ಸೋಂಕಿತರಿಗೆ ಕಳಂಕ, ತಾರತಮ್ಯ ಮಾಡದಿರುವುದು ಕೂಡ ಮುಖ್ಯ. – ಡಾ| ಬದ್ರುದ್ದಿನ್ ಎಂ.ಎನ್., ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿಗಳು