Advertisement

ಎಸ್ ಎಸ್ ಎಲ್ ಸಿ  ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆ್ಚ್ಚಳ

11:17 AM Jul 17, 2021 | Team Udayavani |

ಕಲಬುರಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲೆಯಲ್ಲಿ 45 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Advertisement

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡಲು ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಜು.19 ಮತ್ತು 22ರಂದು ಹತ್ತನೇ ತರಗತಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಎಂಟು ವಲಯಗಳ ವ್ಯಾಪ್ತಿಯಲ್ಲಿ 25,384 ಜನ ಬಾಲಕರು ಮತ್ತು 19,9973 ಬಾಲಕಿಯರು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಒಟ್ಟಾರೆ 45,357 ಜನ ಪರೀಕ್ಷೆ ಎದುರಿಸಲಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗಿದೆ. ಕೊರೊನಾ ಹಾವಳಿಗೂ ಮುನ್ನ ಜಿಲ್ಲೆಯಲ್ಲಿ 133 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿತ್ತು.

ಆದರೆ, ಈಗ ಕೊರೊನಾ ಸೋಂಕಿನ ಕಾಟ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಪಾಡಲು ಅನುವಾಗುವ ನಿಟ್ಟಿನಲ್ಲಿ 209 ಕೇಂದ್ರಗಳನ್ನು ತೆರೆಯಲಾಗಿದೆ. ಇದರಲ್ಲಿ 185 ಸಾಮಾನ್ಯ ಕೇಂದ್ರ, 20 ಸೂಕ್ಷ್ಮ ಕೇಂದ್ರ, ನಾಲ್ಕು ಕೇಂದ್ರಗಳನ್ನು ಅತಿ ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ. ಈ ನಾಲ್ಕು ಸೂಕ್ಷ್ಮ ಕೇಂದ್ರಗಳು ಆಳಂದ ತಾಲೂಕಿನಲ್ಲೇ ಇವೆ. ಉತ್ತರದಲ್ಲಿ ಅಧಿಕ ವಿದ್ಯಾರ್ಥಿಗಳು: ಪರೀಕ್ಷೆಗೆ ಕುಳಿತುಕೊಳ್ಳುವ ಒಟ್ಟು 45,357 ಜನ ವಿದ್ಯಾರ್ಥಿಗಳ ಪೈಕಿ ಅತಿ ಹೆಚ್ಚು ವಿದ್ಯಾರ್ಥಿಗಳು ಕಲಬುರಗಿ ಉತ್ತರ ವಲಯದಲ್ಲಿ ಇದ್ದಾರೆ. ಇಲ್ಲಿ 10,234 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಬುರಗಿ ದಕ್ಷಿಣ ವಲಯದಲ್ಲಿ 8,273 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಉಳಿದಂತೆ ಚಿತ್ತಾಪುರ-6,799, ಆಳಂದ-5,395, ಜೇವರ್ಗಿ-4,441, ಅಫಜಲಪುರ-3,619, ಸೇಡಂ- 3,511, ಚಿಂಚೋಳಿಯಲ್ಲಿ 3,085 ವಿದ್ಯಾರ್ಥಿ ಗಳು ಪರೀಕ್ಷೆ ಎದುರಿಸಲಿದ್ದಾರೆ. 6,459 ಸಿಬ್ಬಂದಿ ನಿಯೋಜನೆ: ಪರೀಕ್ಷಾ ಕಾರ್ಯಕ್ಕೆ ಶಿಕ್ಷಕರು ಸೇರಿ ಒಟ್ಟಾರೆ 6,459 ಸಿಬ್ಬಂದಿಯನ್ನು ಬಳಸ ಲಾಗುತ್ತಿದೆ. ಕರ್ತವ್ಯಕ್ಕೆ ಹರಾಜರಾಗುವ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ ಗೊಳಿಸಲಾಗಿದೆ. ಈಗಾಗಲೇ 6,181 ಜನ ಮೊದಲ ಲಸಿಕೆ ಪಡೆದಿದ್ದಾರೆ.

Advertisement

2,459 ಮಂದಿ ಎರಡೂ ಲಸಿಕೆ ಪಡೆದಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಕೊರೊನಾ ನಿಯಮಗಳ ಪಾಲನೆ ಹಾಗೂ ಸುರಕ್ಷತಾ ಕ್ರಮ ಅನುರಿಸಲು ಅಗತ್ಯ ಸಿಬ್ಬಂದಿ ಬಳಕೆ ಮಾಡಲಾಗುತ್ತಿದೆ. ಪ್ರತಿಯೊಂದು ಕೇಂದ್ರಕ್ಕೆ ತಲಾ ಇಬ್ಬರಂತೆ ವೈದ್ಯಕೀಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಸೇರಿ 418 ಸಿಬ್ಬಂದಿ ಬಳಕೆ ಮಾಡಲಾಗುತ್ತಿದೆ. ಇವರೊಂದಿಗೆ 209 ಜನ ಸ್ಕೌಟ್‌ ಆ್ಯಂಡ್‌ ಗೈಡ್ಸ್‌ ಸ್ವಯಂ ಸೇವಕರು ಪರೀಕ್ಷಾ ಕರ್ತವ್ಯದಲ್ಲಿ ತೊಡಗಲಿದ್ದಾರೆ. ಪ್ರತಿ ಕೇಂದ್ರದಲ್ಲೂ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕಿÅàನಿಂಗ್‌ ಮಾಡಲು 292 ಥರ್ಮಲ್‌ ಸ್ಯಾRನರ್‌ಗಳು ಹಾಗೂ ಸ್ಯಾನಿಟೈಸರ್‌ ಬಾಟಲ್‌ಗ‌ಳನ್ನು ಹಂಚಿಕೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾÃ

 

Advertisement

Udayavani is now on Telegram. Click here to join our channel and stay updated with the latest news.

Next