Advertisement

ಪಾಲಿಟೆಕ್ನಿಕ್‌ ಕಾಲೇಜಿನಲ್ಲೂ ವಿದ್ಯಾರ್ಥಿಗಳ ಸಂಖ್ಯೆ ಕುಸಿತ

06:40 AM Jul 21, 2018 | |

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಪಾಲಿಟೆಕ್ನಿಕ್‌ ಕಾಲೇಜಿನ ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಏರಿಕೆ ಹಂತದಲ್ಲಿದ್ದ ವಿದ್ಯಾರ್ಥಿಗಳ ಸೇರ್ಪಡೆ ಪ್ರಮಾಣ 2017-18ನೇ ಸಾಲಿನಲ್ಲಿ ಗಣನೀಯವಾಗಿ ಇಳಿಕೆಯಾಗಿದೆ.

Advertisement

2016-17ನೇ ಸಾಲಿನಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗೆ ವಿವಿಧ ಕಾಲೇಜಿನಲ್ಲಿ 77,092 ವಿದ್ಯಾರ್ಥಿಗಳು ದಾಖಲಾಗಿದ್ದರು. 2017-18ನೇ ಸಾಲಿನಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗೆ ಸೇರಿದ ವಿದ್ಯಾರ್ಥಿಗಳ ಸಂಖ್ಯೆ 67,629ಕ್ಕೆ ಇಳಿಕೆಯಾಗಿದೆ. ಡಿಪ್ಲೊಮಾ ಕೋರ್ಸ್‌ಗೆ 2016-17ರಲ್ಲಿ 58,595 ವಿದ್ಯಾರ್ಥಿಗಳು ಸೇರಿಕೊಂಡಿದ್ದರು. 2017-18ರಲ್ಲಿ ವಿದ್ಯಾರ್ಥಿಗಳ ಸಂಖ್ಯೆ 53,957ಕ್ಕೆ ಕುಸಿದಿದೆ.

ಕಳೆದ ಮೂರ್‍ನಾಲ್ಕು ವರ್ಷಗಳಿಂದ ರಾಜ್ಯದ ಕೆಲವು ಪಾಲಿಟೆಕ್ನಿಕ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವುದನ್ನು ಇಲಾಖೆ ತನ್ನ ವಾರ್ಷಿಕ ವರದಿಯಲ್ಲಿ ಉಲ್ಲೇಖೀಸಿದೆ.

    ವರ್ಷ       ಎಂಜಿನಿಯರಿಂಗ್‌ ಡಿಪ್ಲೊಮಾ
2013- 14     76333          71117
2014 -15     77466          61835
2015 -16     77832          59812
2016 -17     77092          58595
2017 -18     67629          53957

2017- 18ನೇ ಸಾಲಿನಲ್ಲಿ ಇಲಾಖೆ ಮಾಡಿರುವ ಸಾಧನೆ, ಆನ್‌ಲೈನ್‌ ಇಂಟರಾಕ್ಟಿವ್‌ ಕೌನ್ಸೆಲಿಂಗ್‌ ಮೂಲಕ ವಿದ್ಯಾರ್ಥಿಗಳಿಗೆ ಮಾಡಿಕೊಟ್ಟಿರುವ ಅನುಕೂಲ, ಇಲಾಖೆಯನ್ನು ಸಕಾಲ ವ್ಯಾಪ್ತಿಗೆ ತಂದಿದ್ದರಿಂದ ಆಗಿರುವ ಉಪಯೋಗ, ಪಾಲಿಟೆಕ್ನಿಕ್‌ ಕಾಲೇಜುಗಳ ನಿರ್ವಹಣೆ ಸೇರಿದಂತೆ ಒಂದು ವರ್ಷದ ಅಂಕಿ -ಅಂಶ ಸಹಿತವಾದ ವಾರ್ಷಿಕ ವರದಿಯನ್ನುಬಿಡುಗಡೆ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next