Advertisement

Loksabha; ವಿಪಕ್ಷಗಳ ಒಕ್ಕೂಟಕ್ಕೆ ನಾಯಕರೇ ಇಲ್ಲ; ಆರ್.ಅಶೋಕ್ ಲೇವಡಿ

02:57 PM Mar 23, 2024 | Team Udayavani |

ಬೆಂಗಳೂರು: ಇತ್ತೀಚೆಗೆ ನಡೆದ ನಾಲ್ಕು ರಾಜ್ಯಗಳ ಚುನಾವಣಾ ಸೆಮಿಫೈನಲ್‍ನಲ್ಲಿ ಮೂರು ರಾಜ್ಯಗಳನ್ನು ನಾವು ದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ. ಕಾಂಗ್ರೆಸ್ ಸೆಮಿಫೈನಲ್‍ನಲ್ಲಿ ಸೋತು ಸುಣ್ಣವಾಗಿದೆ. ನಾವಂತೂ ಫೈನಲ್‍ಗೆ ತಲುಪಿದ್ದೇವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ತಿಳಿಸಿದರು.

Advertisement

ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ವಿಪಕ್ಷಗಳ ಒಕ್ಕೂಟದ ಜೊತೆಗೆ ಶಸ್ತ್ರಸಜ್ಜಿತರಾಗಿದ್ದ ನಿತೀಶ್ ಕುಮಾರ್ ಅಲ್ಲಿ ಶಸ್ತ್ರತ್ಯಾಗ ಮಾಡಿ ನಮ್ಮ ಜೊತೆ ಬಂದಿದ್ದಾರೆ. ಇಂಡಿಯಾ ಒಕ್ಕೂಟವು ನಾಯಕತ್ವ ಇಲ್ಲದೆ, ದಿಕ್ಕುಕಾಣದಂತಿದೆ. ಮ್ಯಾಚ್, ಮ್ಯಾಚಿನ ದಿನಾಂಕ ಫಿಕ್ಸ್ ಆಗಿದೆ. ಆಟಗಾರರೂ ಫಿಕ್ಸ್ ಆಗಿದ್ದಾರೆ. ಸಾರ್ವಜನಿಕರೂ ಫಿಕ್ಸ್ ಆಗಿದ್ದಾರೆ. ನಮ್ಮ ಕ್ಯಾಪ್ಟನ್ ನರೇಂದ್ರ ಮೋದಿಯವರು ಎಂದು ನಿಗದಿಯಾಗಿದೆ. ಅವರ ಕ್ಯಾಪ್ಟನ್ ಇನ್ನೂ ಫಿಕ್ಸ್ ಆಗಿಲ್ಲ ಎಂದು ವಿಶ್ಲೇಷಿಸಿದರು.

ಜನರ ಭಾವನೆ, ಜನಮಿಡಿತದೊಂದಿಗೆ ಮೋದಿಯವರು ಗೆಲ್ಲಲಿದ್ದಾರೆ. ನಾಯಕತ್ವ ಘೋಷಣೆ ಆಗುವ ಮೊದಲೇ ಮ್ಯಾಚ್ (ಚುನಾವಣೆ) ನಡೆಯಲಿದ್ದು, ಇಂಡಿಯಾ ಒಕ್ಕೂಟ ಸೋತು ಸುಣ್ಣವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕದಲ್ಲೂ ನಮಗೆ ಒಳ್ಳೆಯ ವಾತಾವರಣ ಇದೆ. 10 ತಿಂಗಳಲ್ಲಿ 10 ತಪ್ಪು, 10 ಭ್ರಷ್ಟಾಚಾರಗಳನ್ನು, ಸಮಾಜದ್ರೋಹಿಯಾದ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ ಎಂದರು.

Advertisement

ಮಂಡ್ಯದಲ್ಲಿ ಹನುಮಧ್ವಜ ಇಳಿಸಿ ಹಿಂದೂಗಳಿಗೆ ಅನ್ಯಾಯ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರ ರಾಮಜನ್ಮಭೂಮಿಯ ಕೇಸನ್ನು 24 ವರ್ಷಗಳ ಬಳಿಕ ಕೆದಕಿ ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು, ಅವರು ಕಾಂಗ್ರೆಸ್ ಕಾರ್ಯಕರ್ತರೆಂದು ಸಾಬೀತಾಗಿದೆ ಎಂದು ತಿಳಿಸಿದರು.

ಚುನಾವಣೆ ಬಂದಾಗ ಪ್ರಚಾರ ಬೇಕೇ ಬೇಕು. ಅದೇರೀತಿ ಸುಳ್ಳು ಸುದ್ದಿಗಳು ಬಂದಾಗ ಅದಕ್ಕೆ ಸ್ಪಷ್ಟನೆ ನೀಡುವುದು ಪಕ್ಷದ ಕರ್ತವ್ಯ. ಇವೆರಡನ್ನು ಒಂದೇ ಜಾಗದಲ್ಲಿ ಮಾಡಲಾಗುವುದು ಎಂದರು. ಬಿಜೆಪಿ ನಿರಂತರವಾಗಿ ಮಾಧ್ಯಮ ಸ್ನೇಹಿಯಾಗಿ ಕೆಲಸ ಮಾಡಿದೆ. ಪ್ರತಿ ಚುನಾವಣಾ ಸಂದರ್ಭದಲ್ಲೂ ಈ ಥರ ಮಾಧ್ಯಮ ಕೇಂದ್ರವನ್ನು ತೆರೆಯಲಾಗುತ್ತಿದೆ. ಇದು ಮಾಧ್ಯಮದವರಿಗೆ ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next