Advertisement
ರೈಲ್ವೇ ಮೇಲ್ಸೇತುವೆಯ ಎರಡು ಬದಿಯ ತಡೆಗೋಡೆ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದೆ. ಮೇಲ್ಸೇತುವೆ ಯಿಂದ ರಸ್ತೆಗೆ ಸಂಪರ್ಕ ಕಲ್ಪಿಸುವ ಕಾಮಗಾರಿ ನಡೆಯುತ್ತಿದೆ. ರಸ್ತೆಗೆ ಜಲ್ಲಿ ಅಳವಡಿಸಲಾಗಿದ್ದು, ಇನ್ನೇನು ಕೆಲ ದಿನಗಳಲ್ಲಿಯೇ ಕಾಂಕ್ರೀಟ್ ಕಾಮಗಾರಿ ನಡೆಯಲಿದೆ. ಈ ಭಾಗದಲ್ಲಿ ಕಾಮಗಾರಿ ನಡೆ ಯುವ ಕಾರಣ ದಿಂದಾಗಿ ವಾಹನ ಸಂಚಾರದಲ್ಲಿ ಯೂ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ.
Related Articles
Advertisement
ಈ ನಿಟ್ಟಿನಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ವೇಗ ನೀಡಲು ಪ್ರೀ ಫ್ಯಾಬ್ರಿಕ್ ಕಾಂಕ್ರೀಟ್ ವ್ಯವಸ್ಥೆ ಅಳವಡಿಸಲು ರೈಲ್ವೇ ಇಲಾಖೆ ಮುಂದಾಗಿತ್ತು. ಬಳಿಕ ಕಾಮಗಾರಿಗೆ ವೇಗ ನೀಡಲಾಗಿದ್ದು, ಸದ್ಯ ಕೊನೆಯ ಹಂತದ ಕಾಮಗಾರಿ ನಡೆಯುತ್ತಿದೆ. ಮಂಗಳೂರು ಜಂಕ್ಷನ್‌ನಿಂದ ತೋಕೂರು ವರೆಗಿನ ಹಳಿ ದ್ವಿಪಥ, ವಿದ್ಯುದ್ಧೀಕರಣ ಕಾಮಗಾರಿ ಉದ್ದೇಶದಿಂದಾಗಿ ಪಚ್ಚನಾಡಿಯಲ್ಲಿನ ಹಳೇ ಸೇತುವೆಯನ್ನು 2 ವರ್ಷಗಳ ಹಿಂದೆ ಯೇ ತೆರವು ಗೊಳಿಸಲಾಗಿತ್ತು. ಹಳೇ ಸೇತುವೆಯ ಪಿಲ್ಲರ್ ಇದ್ದ ಸ್ಥಳದಲ್ಲೇ ರೈಲ್ವೇ ಹೊಸ ಹಳಿ ಸಾಗುವ ಹಿನ್ನೆಲೆಯಲ್ಲಿ ಸೇತುವೆಯನ್ನು ವಿಸ್ತರಿಸುವ ಜತೆಗೆ ಕೊಂಚ ಎತ್ತರಕ್ಕೆ ಏರಿಸಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿತ್ತು.
ಮೇಲ್ಸೇತುವೆ ಕಾಮಗಾರಿ 2018ರ ಜನವರಿ ತಿಂಗಳಿನಲ್ಲಿ ಆರಂಭಗೊಂಡಿತ್ತು. ಈ ರಸ್ತೆಯ ಮುಖೇನ ಪಿಲಿಕುಳ, ಕಟೀಲು, ಮೂಡುಬಿದಿರೆ, ಸುರತ್ಕಲ್, ಪಣಂಬೂರು, ವಾಮಂಜೂರು ಸಹಿತ ಅನೇಕ ಪ್ರದೇಶಗಳ ಸಂಪರ್ಕಕ್ಕೆ ಸಾಧ್ಯವಾಗುತ್ತದೆ. ಸ್ಥಳೀಯ ಮನಪಾ ಸದಸ್ಯೆ ಸಂಗೀತ ನಾಯಕ್ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಸದ್ಯ ವೇಗ ನೀಡಲಾಗಿದ್ದು, ಮೇಲ್ಸೇತುವೆಯಿಂದ ರಸ್ತೆ ಸಂಪರ್ಕ ಕಾಂಕ್ರೀಟ್ ಕಾಮಗಾರಿ ಸದ್ಯದಲ್ಲಿಯೇ ಪೂರ್ಣಗೊಳ್ಳಲಿದೆ. ತಾಂತ್ರಿಕ ಕಾರಣದಿಂದಾಗಿ ಕಾಮಗಾರಿ ವಿಳಂಬ ವಾಗಿತ್ತು. ಅ. 10ರಿಂದ ಈ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ಬದಲಾ ವಣೆ ಮಾಡಲಾಗುತ್ತದೆ. ಈಗಾಗಲೇ ಪರ್ಯಾಯ ರಸ್ತೆ ಕೂಡ ಮೀಸಲಿರಿಸಿದ್ದು, ಅದರಂತೆ ಬೋಂದೆಲ್ ಜಂಕ್ಷನ್‌ನಿಂದ ಮಂಜಲ್ಪಾದೆಯಾಗಿ ಪಚ್ಚನಾಡಿ ಬ್ರಿಡ್ಜ್ ಸಂಪರ್ಕ ನೀಡಲಾಗುತ್ತದೆ’ ಎನ್ನುತ್ತಾರೆ.
ಕಾಮಗಾರಿಗೆ ವೇಗಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಈ ಭಾಗದ ಹಲವು ವರ್ಷಗಳ ಬೇಡಿಕೆ. ಕಾಮಗಾರಿಗೆ ಸದ್ಯ ವೇಗ ನೀಡಲಾಗಿದ್ದು, ಕೊನೆಯ ಹಂತದ ಕಾಮಗಾರಿ ನಡೆಯುತ್ತಿದೆ. ಈ ವರ್ಷಾಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುತ್ತದೆ. ರೈಲ್ವೇ ಮೇಲ್ಸೇತುವೆ ಮುಂದುವರೆದ ಕಾಮಗಾರಿಗೆ ಹೆಚ್ಚುವರಿ ಹಣ ಒದಗಿಸಲಾಗುತ್ತದೆ.
– ಡಾ| ಭರತ್ ಶೆಟ್ಟಿ ವೈ., ಶಾಸಕರು.