Advertisement

ಪಕ್ಷವು ನಿರೀಕ್ಷೆಗೂ ಮೀರಿದ ಅವಕಾಶ ನೀಡಿದೆ: ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

03:33 PM Jun 13, 2020 | keerthan |

ಬೆಳಗಾವಿ: ಬಿಜೆಪಿ ಪಕ್ಷವು ನನ್ನ ನಿರೀಕ್ಷೆಗೂ ಮೀರಿ ಅವಕಾಶ ಕೊಟ್ಟಿದೆ.  ಮುಂಬರುವ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯದ ನಡುವೆ ಸಂಪರ್ಕದ ಕೊಂಡಿಯಾಗಿ ಕೆಲಸ ಮಾಡುತ್ತೇನೆ ಎಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

Advertisement

ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿ  ನಾನೂ ಸಹ ರಾಜ್ಯಸಭಾ ಟಿಕೆಟ್ ನಿರೀಕ್ಷೆ ಮಾಡಿರಲಿಲ್ಲ. ಆದರೆ ಪಕ್ಷದ ವರಿಷ್ಠರು ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ ಎಂದರು.

ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ನನ್ನ ಆಯ್ಕೆಗೆ ಎಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಹೋಗುತ್ತೇವೆ ಎಂದರು.

ಬೆಳಗಾವಿಯ ಡಿಸಿಸಿ ಬ್ಯಾಂಕ್ ಸಹಕಾರ ಕ್ಷೇತ್ರದಲ್ಲಿ ತನ್ನದೆಯಾದ ಕೊಡುಗೆ ನೀಡುತ್ತ ಬಂದಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಬಗ್ಗೆ ಪಕ್ಷದ ವರಿಷ್ಠರ ಸೂಚನೆ ಮೆರೆಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುತ್ತಾರೆ. ಯಾರೇ ಅಧ್ಯಕ್ಷರಾದರೂ ಬಿಜೆಪಿಯವರೆ ಆಗುತ್ತಾರೆ ಎಂದರು.

ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೂ ರಾಜ್ಯಸಭೆಯಲ್ಲಿ ಆಯ್ಕೆ ಮಾಡಿರುವುದಕ್ಕೆ ಸಂತಸವಾಗಿದೆ. ರಾಜ್ಯಸಭೆ ಎಂದರೆ ಬೇರೆ ಕಲ್ಪನೆ ಇತ್ತು. ಆದರೆ ಈಗ ಬದಲಾಗಿದೆ. ಬಿಜೆಪಿ ಪರಂಪರೆಯನ್ನು ಬೇರೆ ಪಕ್ಷದಲ್ಲಿ ಕಾರ್ಯಕರ್ತರು ಕೇಳುತ್ತಿದ್ದಾರೆ ಎಂದರು.

Advertisement

ಬೆಳಗಾವಿ ಜಿಪಂ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ರಾಜ್ಯಸಭೆಯ ಅನುದಾನ ಸರಿಯಾಗಿ ಸದ್ಬಳಕೆಯಾಗದೆ ವಾಪಸ್ಸ ಹೋದ ಉದಾಹರಣೆ ಸಾಕಷ್ಟಿದೆ. ರಾಜ್ಯ ಸಭೆಗೆ ಯಾವ ಯಾವ ಇಲಾಖೆ ಒಳಪಡುತ್ತವೆ ಎಂಬುದನ್ನು ಅಧ್ಯಯನ ಮಾಡುತ್ತೇನೆ. ಬಳಿಕ ನನ್ನದೆ ಆದ ರೂಪರೇಷೆಗಳನ್ನು ಸಿದ್ದಪಡಿಸಿಕೊಂಡು ಎಲ್ಲರ ಸಹಕಾರದಿಂದ ಕರ್ನಾಟಕವನ್ನು ಅಭಿವೃದ್ಧಿ ಪಥದತ್ತ ಕೊಂಡೊಯುವಲ್ಲಿ ಪ್ರಮುಖ ಪಾತ್ರ ವಹಿಸುವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next