Advertisement

ದಲಿತ ಸಿಎಂ ವಿಚಾರವನ್ನು ಪಕ್ಷ ನಿರ್ಧರಿಸುತ್ತದೆ: ಡಾ.ಜಿ.ಪರಮೇಶ್ವರ್

01:30 PM Dec 07, 2022 | Team Udayavani |

ಬೆಂಗಳೂರು: ದಲಿತ ಮುಖ್ಯಮಂತ್ರಿ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ದಲಿತ ಸಮುದಾಯದಲ್ಲಿ ಒಗ್ಗಟ್ಟು ಮೂಡಿಸಲು ಜನವರಿ 8 ರಂದು ಐಕ್ಯತಾ ಸಮಾವೇಶ ನಡೆಸಲಾಗುವುದು ಎಂದು ಕಡಿಮೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ.

ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ.ನಮ್ಮನ್ನು ಒಡೆದು ಆಳುವ ಪ್ರಯತ್ನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದಲಿತ ಸಮುದಾಯದವರಲ್ಲಿ ಹೊಸ ಭರವಸೆ ಮೂಡಿಸುವುದಕ್ಕಾಗಿ ಐಕ್ಯತಾ ಸಮಾವೇಶ‌ ನಡೆಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಸಿದ್ರಾಮುಲ್ಲಾ ಖಾನ್ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ

ಎಲ್ಲರನ್ನು ಒಂದು ವೇದಿಕೆಯಲ್ಲಿ ತರಬೇಕೆಂಬ ಕಾರಣಕ್ಕೆ ಸಮಾವೇಶ ನಡೆಸಲಾಗುತ್ತಿದೆ.ಜನವರಿ ೮ರಂದು ದಲಿತ ಸಮಾವೇಶವನ್ನ ಆಯೋಜಿಸಲಾಗಿದೆ.‌ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರನ್ನ ಸನ್ಮಾನಿಸಲಾಗುವುದು.ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್, ಎಂ.ಬಿ ಪಾಟೀಲ್ ಭಾಗಿಯಾಗಲಿದ್ದಾರೆ.ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಇಲ್ಲವೇ ಸೋನಿಯಾ ಗಾಂಧಿ ಪೈಕಿ ಯಾರಾದರೊಬ್ಬರು ಭಾಗಿಯಾಗಲಿದ್ದಾರೆ.

Advertisement

ದಲಿತ ಸಿಎಂ ವಿಚಾರವನ್ನು ನಾವು ಪಕ್ಷದ ಚೌಕಟ್ಟಿನಲ್ಲಿ ನಾವು ಚರ್ಚೆ ಮಾಡುತ್ತೇವೆ.ಆ ಸಂದರ್ಭ ಬಂದಾಗ ನಾವು ಹೈಕಮಾಂಡ್ ಗಮನಕ್ಕೆ ತರ್ತೇವೆ. ಸಂದರ್ಭ ಬಂದಾಗ ಈ ಬಗ್ಗೆ ತೀರ್ಮಾನವಾಗುತ್ತದೆ.ವೈಯುಕ್ತಿಕವಾಗಿ ಇಲ್ಲಿ ಪ್ರಶ್ನೆ ಉದ್ಭವಿಸುವುದಿಲ್ಲ.ಸಿಎಂ ಯಾರು ಅನ್ನೋದು ಪಕ್ಷ ನಿರ್ಧರಿಸಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next