Advertisement

ಆತ್ಮಾವಲೋಕನ‌ ಮಾಡಿಕೊಳ್ಳಿ: ಉಭಯ ಸದನದಲ್ಲಿ ಅನುರಣಿಸಿದ ‘ಪೇಸಿಎಂ’ವಿವಾದ

03:03 PM Sep 22, 2022 | Team Udayavani |

ಬೆಂಗಳೂರು : ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಆರಂಭಿಸಿದ್ದ ” ಪೇಸಿಎಂ” ವಿವಾದ ವಿಧಾನಮಂಡಲದ ಉಭಯ ಸದನಗಳಲ್ಲಿ ಅನುರಣಿಸಿದ್ದು, ಒಬ್ಬ ಮುಖ್ಯಮಂತ್ರಿಯ ವಿರುದ್ಧ ಇಂಥ ಅಭಿಯಾನ ನಡೆಸಿದ್ದಕ್ಕಾಗಿ ಕಾಂಗ್ರೆಸ್ ಆತ್ಮಾವಲೋಕನ‌ ಮಾಡಿಕೊಳ್ಳಬೇಕು ಎಂದು ಸಂಸದ ಜೆ.ಸಿ.ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಇದನ್ನೂ ಓದಿ: ಪೊಲೀಸ್ ಕ್ರಮದ ಹಿಂದೆ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣನೆ: ಆರಗ ಜ್ಞಾನೇಂದ್ರ

ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಅಭಿಯಾನ ಮಾಡುವುದು ಸರಿಯಲ್ಲ. ಇಂದು ನಾವು ಅಧಿಕಾರದಲ್ಲಿದ್ದೇವೆ, ನಾಳೆ ನೀವು ಬರಬಹುದು. ಆದರೆ ಮಾನಹಾನಿಕಾರಕ ಅಭಿಯಾನಕ್ಕೂ ಒಂದು ಮಿತಿ‌ ಇರುತ್ತದೆ. ಹೀಗಾಗಿ ಇದೆಲ್ಲದಕ್ಕೂ ಒಂದು ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದೆ ಎಂದು ಮಾಧುಸ್ವಾಮಿ ಅಭಿಪ್ರಾಯಪಟ್ಟರು.

ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರು ಪೇಸಿಎಂ ಮಾಸ್ಕ್ ಧರಿಸಿ ಬಂದು ಸಭಾಪತಿ ಪೀಠದ ಎದುರು ಪ್ರತಿಭಟನೆ ನಡೆಸಿದರು. ಅದೇ ವೇಳೆ ಕೆಲ ವಿಧೇಯಕಗಳನ್ನು ಪಾಸ್ ಮಾಡಿಕೊಳ್ಳಲಾಯಿತು. ಕಾಂಗ್ರೆಸ್ ವಿರುದ್ಧ ಬಿಜೆಪಿ ಸದಸ್ಯರು ಭಿತ್ತಿಪತ್ರ ಪ್ರದರ್ಶನ ಮಾಡಿದರು. ಇನ್ನೊಂದೆಡೆ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಪಿ.ರಾಜೀವ್ ಈ ವಿಚಾರ ಪ್ರಸ್ತಾಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಕಾಂಗ್ರೆಸ್ ಚಿತಾವಣೆಯಿಂದಲೇ ಈ ಕೃತ್ಯ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಮಾಜಿ ಸಚಿವ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಉಭಯ ಪಕ್ಷಗಳ ಶಾಸಕರು ವಾದ- ವಿವಾದದಲ್ಲಿ ತೊಡಗಿದರು.‌ಕೊನೆಗೆ ಮಾಧುಸ್ವಾಮಿ ಮಧ್ಯ ಪ್ರವೇಶಿಸಿ ಸಿಎಂ ವಿರುದ್ಧ ಮಾನಹಾನಿಕರ ಭಿತ್ತಿಪತ್ರ ಹಂಚಿದ ಹಿನ್ನೆಲೆಯಲ್ಲಿ ದಾಖಲಾದ ದೂರಿನ‌‌ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next