ಬೆಳಗಾವಿ: ಕೋವಿಡ್-19 ಶಂಕಿತ ವ್ಯಕ್ತಿಯಿಂದ ಗಂಟಲು ದ್ರವ ಮಾದರಿ ಸಂಗ್ರಹಿಸಲು ಹೋದಾಗ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮೇಲೆ ತಾಲೂಕಿನ ಮರಣಹೊಳ ಗ್ರಾಮದ ಕೆಲವರು ಹಲ್ಲೆ ನಡೆಸಿ, ಬಟ್ಟೆ ಹರಿದು ಅವಮಾನಿಸಿದ ಘಟನೆ ಶುಕ್ರವಾರ ನಡೆದಿದೆ.
ಪಿಡಿಒ ಪ್ರಶಾಂತ ಮುನ್ನೋಳಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಹಲ್ಲೆಗೆ ಒಳಗಾಗಿದ್ದಾರೆ. ಜತೆಗೆ ಪಿಡಿಒ ಅವರ ಮಾಡಿ ಮೊಬೈಲ್ ಒಡೆಯಲಾಗಿದೆ. ಹಲ್ಲೆಗೊಳಗಾದ ಈ ಇಬ್ಬರೂ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.
ಮರಣಹೊಳ ಗ್ರಾಮದಲ್ಲಿ ಕೋವಿಡ್-19 ಪಾಸಿಟಿವ್ ವರದಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೆಲವರನ್ನು ಗ್ರಾಮದ ಶಾಲೆಯಲ್ಲಿ ಕ್ವಾರಂಟೈನ್ ಮಾಡಿ ಇಡಲಾಗಿತ್ತು. ಅದರಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಹೋಗಿ ಗಂಟಲು ದ್ರವ ಮಾದರಿ ಸಂಗ್ರಹಿಸುವಾಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಹಲ್ಲೆ ನಡೆಸಿದ್ದಾರೆ. ಮೈ ಮೇಲಿನ ಬಟ್ಟೆ ಹರಿದು ಹಲ್ಲೆ ನಡೆಸಿದ್ದು, ಈ ವೇಳೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಶುಕ್ರವಾರ ಬೆಳಗ್ಗೆ ತಹಶಿಲ್ದಾರರರು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿದ್ದರು. ಆಗ ಗಂಟಲು ಮಾದರಿ ಕೊಡುವುದಗಿ ಒ್ಪಿಕೊಂಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಹೋದಾಗ ಗಂಟಲು ದ್ರವ ಮಾದರಿ ನೀಡಲು ನಿರಾಕರಿಸಿದರು. ಈ ಬಗ್ಗೆ ತಿಳು ಹೇಳಲು ಹೋಗಿದ್ದ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ ಅಲ್ಲಿಂದ ಓಡಿ ಹೋದಾಗ ಬೆನ್ನತ್ತಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಮಹಾರಾಷ್ಟ್ರದಿಂದ ಬಂದಿದ್ದ ಕೆಲವರ ವರದಿಗಳು ಪಾಸಿಟಿವ್ ದೃಢವಾಗಿತ್ತು. ಚಿಕಿತ್ಸೆ ನಂತರ ನೆಗೆಟಿವ್ ಬಂದಾಗ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.