Advertisement

ಕಳೆದ ಮೂರು ದಿನಗಳ ಕಳಸಾ ಬಂಡೂರಿ ಹೋರಾಟ ಕೈಬಿಟ್ಟ ರೈತರು; ಆರೋಪವೇನು?

10:47 AM Oct 20, 2019 | Nagendra Trasi |

ಬೆಂಗಳೂರೂ; ಮಹದಾಯಿ ಯೋಜನೆಯ ಅಧಿಸೂಚನೆ ಹೊರಡಿಸಲು ರಾಷ್ಟ್ರಪತಿ ಮತ್ತು ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತರು ಶನಿವಾರ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

Advertisement

ಪ್ರತಿಭಟನೆ ನಡೆಸಲು ಮುಂದಾದರೆ ಹೊಡೆಸುತ್ತೀರಿ, ಕೊಲೆ ಮಾಡಿಸುತ್ತೀರಿ ಎಂದು ರೈತ ಮುಖಂಡ ವೀರೇಶ್ ಈ ಸಂದರ್ಭದಲ್ಲಿ ಗಂಭೀರ ಆರೋಪ ಮಾಡಿದರು. ಕೊನೆಗೂ ರಾಜ್ಯಪಾಲರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿಶೇಷ ಕರ್ತವ್ಯಾಧಿಕಾರಿಗೆ ಮನವಿ ಸಲ್ಲಿಸಿ ರೈತರು ವಾಪಸ್ ಆಗಿದ್ದಾರೆ.

ರಾಜ್ಯಪಾಲ ವಜೂಭಾಯ್ ವಾಲಾ ಅವರು ಖುದ್ದಾಗಿ ಮನವಿ ಸ್ವೀಕರಿಸದಿರುವುದಕ್ಕೆ ಮಹಿಳಾ ಹೋರಾಟಗಾರರು ಕಣ್ಣೀರು ಸುರಿಸುತ್ತಾ ಅಸಮಾಧಾನ ವ್ಯಕ್ತಪಡಿಸಿದರು. ನಮ್ಮ ಕಷ್ಟಕ್ಕೆ ಸರಕಾರ, ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಅಹವಾಲು ತೋಡಿಕೊಂಡರು.

ಶನಿವಾರ ಬೆಳಗ್ಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಪ್ರತಿಭಟನಾ ನಿರತರ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿಯೂ ರಾಜ್ಯಪಾಲರ ಭೇಟಿಗೆ ಅವಕಾಶ ಮಾಡಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ರಾಜ್ಯಪಾಲರ ಭೇಟಿಗೆ ಅವಕಾಶ ಸಿಗುವ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕಾರಜೋಳ ಅವರ ಸಂಧಾನ ವಿಫಲವಾಗಿ ವಾಪಸ್ ಆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next