ಇದು ಪ್ರಜಾಪ್ರಭುತ್ವ ರಾಷ್ಟ್ರ.ಪ್ರಜೆಗಳು ಹೇಳಿದಂತೆ ನಾವು ಕೇಳಬೇಕಷ್ಟೇ. ನಾವು ಹೇಳಿದ್ದೆಲ್ಲ ಇಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್ ಮುಕ್ತ ಭಾರತ, ಪ್ರತಿಪಕ್ಷ ಮುಕ್ತ ಭಾರತ ಮಾಡುತ್ತೇವೆಂಬುದೆಲ್ಲ ಕೇವಲ ಅಹಮಿಕೆ. ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ. ಸಮಸ್ಯೆ ಮುಕ್ತ ಭಾರತ ಮಾಡುವುದರತ್ತ ಅಧಿಕಾರರೂಢ ಬಿಜೆಪಿ ಮನಸ್ಸು ಮಾಡಲಿ ಎಂದು ಬರೆದಿದ್ದಾರೆ.
Advertisement
ಪಂಚರಾಜ್ಯಗಳ ಫಲಿತಾಂಶದಲ್ಲಿ ಛತ್ತೀಸ್‌ಗಢದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದ್ದು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಹಿನ್ನಡೆ ಅನುಭವಿಸಿದ್ದು ಅಧಿಕಾರಕ್ಕೇರುವ ಕಷ್ಟ ಸಾಧ್ಯಗಳು ಎದುರಾಗಿವೆ. ತೆಲಂಗಾಣ ಮತ್ತು ಮಿಜೋರಾಂನಲ್ಲಿ ಬೆರಳೆಣಿಕೆಯ ಸ್ಥಾನಗಳನ್ನು ಮಾತ್ರ ಗೆದ್ದಿದೆ.