Advertisement

ರಾಜ್ಯದ ಬಡಜನತೆ ದಂಗೆ ಏಳಬಹುದು; ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಏನಿದೆ?

09:28 AM Aug 18, 2019 | Nagendra Trasi |

ಬೆಂಗಳೂರು:ನಮ್ಮ ಸರಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ(ಬಿಜೆಪಿ) ಸರಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು, ಎಚ್ಚರ ಇರಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹಿಂದಿನ ಸರಕಾರ ವಿವಿಧ ಭಾಗ್ಯ, ಯೋಜನೆಗಳನ್ನು ರದ್ದು ಮಾಡುವ ಸಾಧ್ಯತೆ ಇದೆ ಎಂಬ ವರದಿ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಹಿಂದಿನ ನಮ್ಮ ಸರಕಾರದ ಯೋಜನೆ ರದ್ದುಪಡಿಸಿಸುವ ನಿರ್ಧಾರಕ್ಕೆ ಮುಂದಾದರೆ ಇಂತಹ ಜನ ವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ. ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


ಕರ್ನಾಟಕವನ್ನು ಯಾವ ಪ್ರಧಾನಿಯೂ ನಿರ್ಲಕ್ಷಿಸಿಲ್ಲ:

ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ ವಾಜಪೇಯಿ ಸರಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಸಿದ್ದರಾಮಯ್ಯ ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

Advertisement

ಸಿದ್ದರಾಮಯ್ಯ ಟ್ವೀಟ್ ಗೆ ಆರ್.ಅಶೋಕ್ ತಿರುಗೇಟು:

ರಾಜ್ಯದಲ್ಲಿನ ನೆರೆ, ಬರ ಪರಿಹಾರ ವಿಚಾರದಲ್ಲಿ ರಾಜಕೀಯ ಮಾಡಬಾರದು. ಇಂತಹ ವಿಚಾರದಲ್ಲಿ ಸಿದ್ದರಾಮಯ್ಯನವರು ಕುಮ್ಮಕ್ಕು ನೀಡಬಾರದು ಎಂದು ಬಿಜೆಪಿ ನಾಯಕ ಆರ್,ಅಶೋಕ್ ನವದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಜನಪ್ರಿಯ ಯೋಜನೆ ರದ್ದು ಇಲ್ಲ: ಬಿಎಸ್ ವೈ

ಜನಪ್ರಿಯ ಯೋಜನೆ ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಮ್ಮ ಸರಕಾರ ಜನಪರ ಸರಕಾರ, ಅನ್ನಭಾಗ್ಯ ಯೋಜನೆ ಮುಂದವರಿಸಲು ಅನುದಾನ ಬಿಡುಗಡೆ ಕಡತಕ್ಕೆ ಈಗಾಗಲೇ ಸಹಿ ಹಾಕಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next