ಯಲ್ಲಿ ಹಣ ಇಲ್ಲದಿದ್ದರೂ, ಸಿಎಂ ಸಿದ್ದರಾಮಯ್ಯ ಆಶ್ವಾಸನೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಆರೋಪಿಸಿದರು.
Advertisement
ತಾಲೂಕಿನ ಮದಗಾನಕುಂಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಕರವೇ ತಾಲೂಕು ಅಧ್ಯಕ್ಷ ಗಜೇಂದ್ರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ನೂತನವಾಗಿ ಸೇರ್ಪಡೆಯಾಗಿರುವ ಯುವಕರು ಪ್ರತಿ ಬೂತ್‌ನಲ್ಲಿ ಪಕ್ಷ ಸಂಘಟಿಸಿ ಶಾಸಕರನ್ನು ಗೆಲ್ಲಿಸಿಕೊಳ್ಳುವುದರ ಮೂಲಕ ಮತ್ತೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ. ಪ್ರಧಾನಿ ನರೇಂದ್ರ ಮೋದಿ ಉತ್ತಮ ಜನಪ್ರಿಯ ಕಾರ್ಯಕ್ರಮ ಮಾಡುತ್ತಿದಾರೆ. ಪ್ರತಿ ಮನೆ ಮನೆಗೆ ತಿಳಿಸುವ ಕಾರ್ಯ ಆಗಬೇಕು. ಚುನಾವಣೆ ಎಂಬ ಯುದ್ಧಕ್ಕೆ ಸೈನಿಕರಂತೆ ಸಿದ್ಧರಾಗಬೇಕು ಎಂದು ಹೇಳಿದರು.
ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೇಶದ್ರೋಹಿ ಸಂಘಟನೆಗಳನ್ನು ಓಲೈಸಲು ದೇಶದ ಸಂಸ್ಕೃತಿಯ ಪ್ರತೀಕವಾಗಿರುವ ಆರ್ಎಸ್ಎಸ್ ಸಂಘ ಪರಿವಾರ ಸಂಘಟನೆಗಳ ಕಾರ್ಯಕರ್ತರನ್ನು ಉಗ್ರಗಾಮಿಗಳು ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ಕೇವಲ ಭಾಗ್ಯಗಳ ಸರ್ಕಾರವಾಗಿದೆ. ಕಳೆದ ನಾಲ್ಕೂವರೆ ವರ್ಷದಲ್ಲಿ ಯಾವುದೇ ಅಭಿವೃದ್ಧಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು. ನೀತಿ ನಿರೂಪಣೆ ರಾಜಕೀಯ ವಿಶ್ಲೇಷಣೆ ಪ್ರಕೋಷ್ಠ ಸಂಚಾಲಕ ಡಿ.ಆರ್.ನಾರಾಯಣ ಸ್ವಾಮಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಯುವಕರು ಜನರಿಗೆ ತಿಳಿಸಿಕೊಡಬೇಕು. ಹೆಚ್ಚಿನ ಯುವಕರು ಪಕ್ಷಕ್ಕೆ ಸೇರ್ಪಡೆ ಯಾಗುತ್ತಿರುವುದರಿಂದ ಆನೆ ಬಲ ಬರುತ್ತಿದೆ. ರಾಜ್ಯ ಸರ್ಕಾರ ಹಲವಾರು ಯೋಜನೆಗಳು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗಳಿಗೆ ತಮ್ಮ ಫೋಟೋ ಹಾಕಿಸಿಕೊಂಡು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಹಣ ಲೂಟಿ: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್.ಎಂ.ರವಿಕುಮಾರ್ ಮಾತ ನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಧರ್ಮ ಮತ್ತು ಜಾತಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಹಣ ಲೂಟಿ ಮಾಡುತ್ತಿದೆ. ಅರೆಬರೆ ಕಾಮಗಾರಿಗಳನ್ನು ಉದ್ಘಾಟಿಸಿ ಕಮೀಷನ್ ಆಸೆಗಾಗಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು. ತಾಲೂಕು ಬಿಜೆಪಿ ಅಧ್ಯಕ್ಷ ಸಿ.ನಾಗರಾಜ ಗೌಡ, ಪ್ರಧಾನ ಕಾರ್ಯದರ್ಶಿ ಸೊಣ್ಣೇಗೌಡ, ರಾಜ್ಯ ಪರಿಷತ್ ಸದಸ್ಯ ದೇಸು ನಾಗರಾಜ್, ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎನ್.ರಾಜಗೋಪಾಲ್, ತಾಲೂಕು ರೈತ ಮೋರ್ಚಾ ಅಧ್ಯಕ್ಷ ಅಗ್ರಹಾರ ರಾಜಣ್ಣ, ಉಪಾಧ್ಯಕ್ಷ ಜಿ.ಎನ್.ಗೋಪಾಲ್,
ಜಿಲ್ಲಾ ಮಾಧ್ಯಮ ಪ್ರಮುಖ್ ಎಸ್.ರಮೇಶ್ ಕುಮಾರ್, ಟೌನ್ ಬಿಜೆಪಿ ಅಧ್ಯಕ್ಷ ನೀಲೇರಿ ಮಂಜುನಾಥ್, ಯುವ ಮೋರ್ಚಾ ಅಧ್ಯಕ್ಷ ಆನಂದಗೌಡ, ಉಪಾಧ್ಯಕ್ಷ ಸತೀಶ್ ಗೋಖರೆ, ಪ್ರಧಾನ ಕಾರ್ಯದರ್ಶಿ ಡಿ.ಆರ್. ಬಾಲರಾಜ್, ಮುಖಂಡ ಜಿ.ಮುನಿಯಪ್ಪ, ಮಂಜುನಾಥಗೌಡ, ಮಂಜುನಾಥ್, ಮಾಚಪ್ಪ, ರಾಧಾಕೃಷ್ಣ ಮತ್ತಿತರರಿದ್ದರು.