ದನಿವಾರಿಸಿಕೊಳ್ಳಲು ಪರದಾಡುವಂತಾಗಿದೆ.
Advertisement
ವಿಶ್ವ ವಿಖ್ಯಾತ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯು ಕಳೆದ ಒಂದು ವಾರದಿಂದ ಇಳಿಮುಖವಾಗಿದೆ. ಇದಕ್ಕೆ ಬಿಸಿಲಿನ ಪ್ರಖರತೆಯೇ ಕಾರಣವಾಗಿದೆ. ಹಂಪಿ ಎಂದರೆ ಕಲ್ಲು ಬಂಡೆ ಹಾಗೂ ಗುಡ್ಡಗಳ ಪ್ರದೇಶವಾಗಿದ್ದು, ತಾಲೂಕಿನಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುವುದರಿಂದ ಹಂಪಿಯತ್ತ ಪ್ರವಾಸಿಗರು ಮುಖ ಮಾಡುತ್ತಿಲ್ಲ, ಇದರಿಂದ ಹಂಪಿಯ ಪರಿಸರದಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿದೆ.ಈಗಾಗಲೇ ಶಾಲಾ-ಕಾಲೇಜುಗಳು ರಜೆ ಬಿಟ್ಟಿದ್ದು, ರಾಜ್ಯದ ವಿವಿಧ ಭಾಗಗಳಿಂದ ಈ ದಿನಗಳಲ್ಲಿ ಸಾವಿರಾರು ಪ್ರವಾಸಿಗರು ಹಂಪಿಗೆ ಆಗಮಿಸುತ್ತಿದ್ದರು. ಆದರೆ ಈ ವರ್ಷ ಅತೀ ಹೆಚ್ಚು ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಪ್ರವಾಸಿಗರು ಹಂಪಿಯತ್ತ ಆಗಮಿಸಲು ಹಿಂದೇಟು ಹಾಕುತ್ತಿದ್ದಾರೆ.
ವಿಶ್ವವಿಖ್ಯಾತ ಹಂಪಿಗೆ ದೇಶ ವಿದೇಶಗಳಿಂದ ಪ್ರತಿ ದಿನವು ಸಾವಿರಾರು ಜನರು ಆಗಮಿಸಿ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುತ್ತಿರುವ ತುಂಗಾಭದ್ರಾ ನದಿಯಲ್ಲಿ ಸ್ನಾನ ಮಾಡಿ ಬಿಸಿಲಿನ ಧಗೆನೀಗಿಸಿಕೊಳ್ಳುತ್ತಿದ್ದರು. ಪ್ರವಾಸಿಗರು ಈ ಬಾರಿ ನದಿಯಲ್ಲಿ ನೀರು ಇಲ್ಲದ ಕಾರಣ ಪರದಾಡುವ ಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಬಿಸಿಲಿನ ತಾಪಮಾನದ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಬೆಳಗಿನ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿವೆ.
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲಿನ ಧಗೆಗೆ ಜನಸಾಮಾನ್ಯರು ತತ್ತರಿಸಿದರೆ, ಮಕ್ಕಳು ವೃದ್ಧರ ಮೈಮೇಲೆ ಬೇಸಿಗೆ ಗುಳ್ಳೆಗಳು ಕಾಣಿಸಿಕೊಂಡಿವೆ. ನಗರದಲ್ಲಿ ನೀರಿನ ಅಭಾವ ತಲೆದೋರಿದ್ದು, ನೀರಿಗೂ ಪರದಾಡುವ ಸ್ಥಿತಿ ವರ್ಷಕ್ಕಿಂತ ಪ್ರಸಕ್ತ ವರ್ಷ ಹೆಚ್ಚಾಗಿದೆ. ಇದೇ ಪರಿಸ್ಥಿತಿ
ಮುಂದುವರಿದರೆ ಅಪಾಯ ತಪ್ಪಿದ್ದಲ್ಲ ಎಂಬ ಆತಂಕದಲ್ಲಿ ಹೊಸಪೇಟೆ ಜನತೆ ಇದ್ದಾರೆ.