Advertisement

‌ಕಟ್ಟಡದಿಂದ ಬಿದ್ದು ವ್ಯಕ್ತಿ ಸಾವು

06:41 AM Apr 11, 2019 | Team Udayavani |

ಬೆಂಗಳೂರು: ಮದ್ಯದ ಅಮಲಿನಲ್ಲಿ ಅಪಾರ್ಟ್‌ಮೆಂಟ್‌ ಕಟ್ಟಡ ಏರುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಶ್ರೀರಾಮಪುರ ನಿವಾಸಿ ವಿಜಯ್‌ ಜೈನ್‌(29) ಮೃತ ವ್ಯಕ್ತಿ.

Advertisement

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ್‌ ಪ್ರತಿನಿತ್ಯ ಮದ್ಯ ಸೇವಿಸುತ್ತಿದ್ದ. ಮಂಗಳವಾರ ರಾತ್ರಿ 11.30ರ ಸುಮಾರಿಗೆ ಮದ್ಯ ಸೇವಿಸಿ ಗಾಯಿತ್ರಿನಗರದ ಮಾರುತಿ ಲೇಔಟ್‌ನಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ಕಟ್ಟಡವನ್ನು ಪೈಪ್‌ ಹಿಡಿದು ಏರುತ್ತಿದ್ದ.

ಈ ವೇಳೆ ಆಯಾತಪ್ಪಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನು ಗಮನಿಸಿದ ಅಪಾರ್ಟ್‌ಮೆಂಟ್‌ನ ಭದ್ರತಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪ್ರಕರಣ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next