Advertisement
ಪರೀಕ್ಷೆಯಲ್ಲಿ ಪಾರದರ್ಶಕತೆ ಸಾಧಿಸಲು, ಸಂಪೂರ್ಣ ಪ್ರಕ್ರಿಯೆಯನ್ನು ಪರಿಶೀಲಿಸಿದ ಅನಂತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಘೋಷಿಸಿದೆ. ಒಟ್ಟು 2.28ಲಕ್ಷ ಮಂದಿ ರವಿವಾರ ಪರೀಕ್ಷೆ ಬರೆಯಬೇಕಿತ್ತು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ (ಎನ್‌ಟಿಎ) ಅಕ್ರಮಗಳು ನಡೆದ ಬೆನ್ನಲ್ಲೆ, ಎನ್‌ಟಿಎ ಪ್ರಧಾನ ನಿರ್ದೇಶಕರಾಗಿದ್ದ ಸುಬೋಧ್ ಕುಮಾರ್ ಸಿಂಗರನ್ನು ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಭಾರತೀಯ ವ್ಯಾಪಾರ ಉತ್ತೇಜನ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೊಲಾ ಅವರನ್ನು ನೇಮಿಸಲಾಗಿದೆ. ಖರೋಲಾ ಈ ಮೊದಲು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ, ಬೆಂಗಳೂರು ನಗರ ಸಾರಿಗೆ ಹಾಗೂ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.