Advertisement

ಪ್ರಮಾಣವಚನಕ್ಕೆ ರಾಜಭವನದಲ್ಲಿ ವೇದಿಕೆ ಸಿದ್ದ 

08:17 AM May 17, 2018 | Team Udayavani |

ಬೆಂಗಳೂರು: 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜಭವನದಲ್ಲಿ ವೇದಿಕೆ ಸಜುವುಗೊಳ್ಳುತ್ತಿದೆ. 9 ಗಂಟೆಗೆ ಸರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಮಾಣವಚನವನ್ನು ಬೋದಿಸಲಿದ್ದಾರೆ.ಕೇಂದ್ರದ ನಾಯಕರಾದ ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರದಾನ್, ಕೆ. ಪಿ.ನಡ್ಡಾ ಹಾಗೂ ರಾಜ್ಯದ ಮುಖಂಡರು, ಕಾರ್ಯಕರ್ತರು ಈ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.   

Advertisement

ವೇದಿಕೆಯನ್ನು ಹೂಗಳಿಂದ ಸಿಂಗರಿಸಲಾಗಿದ್ದು 1000ಕ್ಕೂ ಹೆಚ್ಚಿನ ಆಸನದ ವ್ಯವಸ್ಥೆಗಳನ್ನು ಮಾಡಲಾಗಿದೆ. ಪಾಸ್ ಹೊಂದಿರುವ ಕಾರ್ಯಕರ್ತರಿಗೆ ಮಾತ್ರ ಈ ಸಮಾರಂಭಕ್ಕೆ ಅವಕಾಶ ನೀಡಲಾಗಿದೆ. 
    
ಬಿಎಸ್ ವೈ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ :
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿರುವ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ. ಈ ಮೂಲಕ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. 

ಪ್ರಮಾಣವಚನಕ್ಕೂ ಮೊದಲು ದೇವರ ದರ್ಶನ: 
ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ಯಡಿಯೂರಪ್ಪ ಅವರು ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಾಲಯಕ್ಕೆ ತೆರಳಿದ್ದು ದೇವರ ದರ್ಶನವನ್ನು ಪಡೆದು ನಂತರ ರಾಜಭವನಕ್ಕೆ ತೆರಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next