Advertisement

ಮೈತ್ರಿ ಸರ್ಕಾರ ಉರುಳಿಸೋ ಯತ್ನದಲ್ಲಿ ಪಿಎಂ ಪಾತ್ರವಿದೆ

11:36 PM Jul 13, 2019 | Team Udayavani |

ಹೂವಿನಹಡಗಲಿ: ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಆದಾಗಿನಿಂದಲೂ ಬಿಜೆಪಿ ಒಂದಲ್ಲ ಒಂದು ನೆಪ ಮಾಡಿಕೊಂಡು ವಿನಾಕಾರಣ ಸರಕಾರ ಉರುಳಿಸುವ ಕೆಲಸ ಮಾಡುತ್ತಿದೆ. ಇದರಲ್ಲಿ ಪ್ರಧಾನಿ ಮೋದಿಯವರ ಪಾತ್ರವೂ ಇದೆ ಎಂದು ರಾಜ್ಯ ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರ್‌ ನಾಯ್ಕ ಆರೋಪಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಬಿಜೆಪಿ ಅಧಿ ಕಾರದಾಹದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಪ್ರಯೋಗ ಹೊಸದೇನಲ್ಲ.

2004, 2006ರಲ್ಲಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿವೆ. ಆದರೆ, ಈ ಬಾರಿ ಮೈತ್ರಿ ಸರಕಾರವನ್ನು ಉರುಳಿಸಲೇಬೇಕೆಂದು ಮೋದಿ ಹೊರಟಿದ್ದಾರೆ. ಪ್ರಧಾನಿಯವರು ದೇಶದ ಪ್ರಗತಿಗಾಗಿ ಒಳ್ಳೆಯ ಕೆಲಸ ಮಾಡಬೇಕು. ಅದನ್ನು ಬಿಟ್ಟು ಸಮ್ಮಿಶ್ರ ಸರ್ಕಾರ ಕೆಡವಲು ಪ್ರಯತ್ನಿಸುತ್ತಿರುವುದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದರು.

ಬಿಜೆಪಿ ರಾಜ್ಯದಲ್ಲಿ ಕೆಟ್ಟ ರಾಜಕೀಯ ಸಂಸ್ಕೃತಿ ಹುಟ್ಟು ಹಾಕಿದೆ. ಮೈತ್ರಿ ಪಕ್ಷಗಳ ಶಾಸಕರನ್ನು ಅಡ್ಡಗಟ್ಟಿ ಖರೀದಿ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗುತ್ತಿದೆ. ಬಿಜೆಪಿಯವರು ಅಧಿಕಾರದ ಆಸೆಗಾಗಿ ಭ್ರಷ್ಟಾಚಾರ ಮಾಡಿ ಆ ಮೂಲಕ ಸಂವಿಧಾನದ ಆಶಯವನ್ನು ಗಾಳಿಗೆ ತೂರುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next