Advertisement

ಪಿಎಂ ಕೌಶಲ್ಯ ವಿಕಾಸ ಯೋಜನೆ ಪರಿಣಾಮಕಾರಿ ಜಾರಿ ಅಗತ್ಯ

04:45 PM Jan 11, 2021 | Team Udayavani |

ಚಿತ್ರದುರ್ಗ: ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಸೃಜಿಸಲಾಗಿರುವ ಜಿಲ್ಲಾ ಕೌಶಲ್ಯ ಮಿಷನ್‌ ಗೆ ಪೂರಕವಾಗಿ ಹಾಗೂ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ 3.0ನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ 3.0 ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಯೋಜನೆ ಹಾಗೂ ಕೌಶಲ್ಯ ಕರ್ನಾಟಕ ಯೋಜನೆಯ ಮಾರ್ಗಸೂಚಿ ಅಡಿಯಲ್ಲಿ ಅರ್ಹ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ವಿವಿಧ ಸಮಿತಿ ರಚಿಸಲಾಗಿದೆ. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಬೇಕೆಂದರು.

ಉದ್ಯೋಗಿಗಳ ಬೇಡಿಕೆಯಂತೆ ತರಬೇತಿ ನೀಡಿ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಸಬೇಕು. ಇದರಿಂದ ನಿರುದ್ಯೋಗ ಸಮಸ್ಯೆ ಬಗೆಹರಿಯುವುದರ ಜೊತೆಗೆ ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿ ಕಾರಿ ವಿ. ಸುರೇಶ ಮಾತನಾಡಿ, ಜಿಲ್ಲಾ ಕೌಶಲ್ಯ ಮಿಷನ್‌ ಗೆ ಪೂರಕವಾಗಿ ಹಾಗೂ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ (ಪಿಎಂಕೆವಿವೈ) 3.0 ಜಾರಿಯಾಗಿದೆ. ಜಿಲ್ಲಾ ಮಟ್ಟದಲ್ಲಿ ಕಾರ್ಯದಕ್ಷತೆ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಅಭ್ಯರ್ಥಿಗಳನ್ನು ಗುರುತಿಸುವಿಕೆ ಮತ್ತು ಸಮಾಲೋಚನೆ ಉಪಸಮಿತಿ, ತರಬೇತಿ ಗುಣಮಟ್ಟ, ಕೈಗಾರಿಕಾ ಸಂಪರ್ಕ, ಉಪಸಮಿತಿ, ಸ್ವಯಂ ಉದ್ಯೋಗ, ಗ್ರಾಮ ಪಂಚಾಯತ್‌ ಸಮನ್ವಯ, ಕೃಷಿ ಉಪಸಮಿತಿ, ಸಾಮರ್ಥ್ಯ ವೃದ್ಧಿ ಹಾಗೂ ಮೇಲ್ವಿಚಾರಣೆ ಉಪಸಮಿತಿಗಳಿಗೆ ಕಾರ್ಯಭಾರ ಹಾಗೂ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಸ್ಲಂಗಳು ಜಾತಿ ವ್ಯವಸ್ಥೆಯ ಪ್ರತೀಕ; ರಂಗಕರ್ಮಿ ಪ್ರಸನ್ನ

Advertisement

ಜಿಲ್ಲೆಯ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಯೋಜನೆಯ ಅನುಷ್ಠಾನದ ಗುಣಮಟ್ಟ ತರಬೇತಿ, ಮೂಲಸೌಕರ್ಯ, ಅಭ್ಯರ್ಥಿಗಳಿಗೆ ಉದ್ಯೋಗ ನಿಯುಕ್ತಿ ಇತ್ಯಾದಿ ವಿಷಯಗಳ ಕುರಿತು ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ಧಿಕಾರಿ ಸತೀಶ್‌ ರೆಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ. ಸದಾಶಿವ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next