Advertisement

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

10:30 AM Nov 26, 2024 | Team Udayavani |

ಬೆಂಗಳೂರು: ಶೀಲ ಶಂಕಿಸಿ ಪತ್ನಿಯ ಕುತ್ತಿಗೆಯನ್ನು ವೇಲ್‌ನಿಂದ ಬಿಗಿದು ಕೊಲೆ ಮಾಡಿ ಮಗುವಿನ ಜತೆ ಪರಾರಿಯಾಗಿದ್ದ ಪತಿಯನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಗಂಗೊಂಡನಹಳ್ಳಿ ನಿವಾಸಿ ಇಮ್ರಾನ್‌ ಖಾನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಪತ್ನಿ ಗೌಸಿಯಾ ಖಾನಂ (31) ಎಂಬಾಕೆಯನ್ನು ಹತ್ಯೆಗೈದು ಪರಾರಿಯಾಗಿದ್ದ. ಈ ಸಂಬಂಧ ಚಂದ್ರಾ ಲೇಔಟ್‌ ಠಾಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ವೆಲ್ಡಿಂಗ್‌ ಕೆಲಸ ಮಾಡಿ ಕೊಂಡಿದ್ದು, ಐದು ವರ್ಷದ ಹಿಂದೆ ಗೌಸಿಯಾ ಖಾನಂ ಳನ್ನು ಮದುವೆಯಾಗಿದ್ದ. ದಂಪತಿಗೆ ನಾಲ್ಕು ವರ್ಷದ ಗಂಡು ಮಗುವಿದೆ. ಪತ್ನಿಯ ಶೀಲದ ಬಗ್ಗೆ ಅನುಮಾನ ಗೊಂಡಿದ್ದ ಆರೋಪಿ, ಪದೇ ಪದೆ ಮನೆಯಲ್ಲಿ ಜಗಳ ಮಾಡುತ್ತಿದ್ದ. ಕಳೆದ ಶುಕ್ರವಾರ ಇದೇ ವಿಚಾರಕ್ಕೆ ಪತ್ನಿ ಗೌಸಿಯಾ ಖಾನಂ ಜತೆ ಜಗಳ ತೆಗೆದು ಗಲಾಟೆ ಮಾಡಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿ ವೇಲ್‌ನಿಂದ ಪತ್ನಿಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ನಾಲ್ಕು ವರ್ಷದ ಮಗುವನ್ನು ಕರೆದುಕೊಂಡು ಮನೆಯ ಬಾಗಿಲು ಹಾಕಿಕೊಂಡು ಪರಾರಿಯಾ ಗಿದ್ದ.ಇದೀಗ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next