ಅಧಿಕಾರಿಗಳು ಅಪರಾಧ ನಡೆದ ಸ್ಥಳಗಳಲ್ಲಿ ಸಿವಿಲ್ ಡ್ರಸ್‌ನಲ್ಲಿ ಪಾಲ್ಗೊಳ್ಳುವುದು, ಠಾಣೆಗಳಿಗೆ ಸಾಮಾನ್ಯ ದಿರಿಸಿನಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿರುವುದು. ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ಬಂದಿದ್ದು, ಕಡ್ಡಾಯವಾಗಿ ಸಮವಸ್ತ್ರ
ಧರಿಸುವಂತೆ ತಾಕೀತು ಮಾಡಿದ್ದಾರೆ. ಅಲ್ಲದೆ, ಸಮವಸ್ತ್ರ ಧರಿಸದೇ ಇದ್ದರೆ ಶಿಸ್ತು ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.
Advertisement
ಆದೇಶದಲ್ಲಿ ಏನಿದೆ?: ಪೊಲೀಸ್ ಸಿಬ್ಬಂದಿ ಮಾತ್ರವಲ್ಲದೆ ಅಧಿಕಾರಿಗಳು ಕೂಡ ಇನ್ನು ಮುಂದೆ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಪೊಲೀಸ್ ಸಮವಸ್ತ್ರ ಧರಿಸಬೇಕು. ಹಿರಿಯ ಅಧಿಕಾರಿಗಳು ತಮ್ಮ ಕೈಕೆಳಗಿನ ಸಿಬ್ಬಂದಿ ಡ್ರಸ್‌ಕೋಡ್ ಪಾಲಿಸುವಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಎಸ್‌ಪಿಗಳನ್ನು ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ವಿಚಾರದಲ್ಲಿ ಹಿರಿಯ ಅಧಿಕಾರಿಗಳು ಇತರ ಸಿಬ್ಬಂದಿಗೆ ಮಾದರಿಯಾಗಿರಬೇಕು ಎಂದು ಡಿಜಿಪಿ ತಮ್ಮ ಆದೇಶ ಪತ್ರದಲ್ಲಿ ಉಲ್ಲೇಖೀಸಿದ್ದಾರೆ.