Advertisement

ರಾಜ್ಯಾದ್ಯಂತ ಇಂದು ಪೋಲಿಯೋ ಲಸಿಕೆ

10:46 PM Jan 18, 2020 | Lakshmi GovindaRaj |

ಬೆಂಗಳೂರು: ರಾಜ್ಯಾದ್ಯಂತ ಜ.19ರಂದು (ಭಾನುವಾರ) ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಚಿಕ್ಕಜಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಗ್ಗೆ 6 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Advertisement

ಪೋಷಕರು 5 ವರ್ಷದೊಳಗಿನ ಮಕ್ಕಳನ್ನು ಸಮೀಪದ ಆಸ್ಪತ್ರೆಗಳಿಗೆ ಕರೆತರುವ ಮೂಲಕ ಲಸಿಕೆ ಹಾಕಿಸಬಹುದು. ಅಲ್ಲದೇ ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿಯೂ ಆರೋಗ್ಯ ಇಲಾಖೆಯು ಪೋಲಿಯೋ ಲಸಿಕೆ ಹಾಕಿಸುವ ವ್ಯವಸ್ಥೆಯನ್ನು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next