ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದ್ದು, ಮಂಗಳವಾರ ರಾಯಚೂರಿನಲ್ಲಿ 42.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಸೋಮವಾರ 41.4 ದಾಖಲಾಗಿದ್ದು, ಕೇವಲ ಒಂದು ದಿನದ ಅಂತರದಲ್ಲಿ 1.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗಿದೆ. ಇದು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ರಾಯಚೂರಿನ ಅನಂತರ ಕಲಬುರಗಿಯಲ್ಲಿ 40.5, ವಿಜಯಪುರ 38.9, ಬೀದರ್‌ನಲ್ಲಿ 38.6 ಮತ್ತು ಚಿತ್ರದುರ್ಗ 36.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಇದನ್ನೂ ಓದಿ:ಧರ್ಮಾಪುರದಲ್ಲಿ ಮಾರಮ್ಮದೇವರ ಉತ್ಸವ : ತಂಬಿಟ್ಟು ಆರತಿ ಹೊತ್ತು ಸಾಗಿಬಂದ ಹೆಂಗಳೆಯರು
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತ್ತು ಮಂಚಿಕೆರೆಯಲ್ಲಿ ತಲಾ ಒಂದು ಸೆಂ.ಮೀ. ಮಳೆಯಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.