ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾ.21ರಿಂದ ಮಾ.25ರ ವರೆಗೆ ತುಂತುರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾ.25ರ ವರೆಗೆ ದಕ್ಷಿಣಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ, ಕೊಡಗು ಜಿಲ್ಲೆಗಳಲ್ಲಿ ತುಂತುರು ಮಳೆ ಆಗಲಿದೆ. ಮಾ.24 ಮತ್ತು ಮಾ.25ಕ್ಕೆ ಬೀದರ, ಕಲಬುರಗಿ, ವಿಜಯಪುರ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿ:ಅತ್ಯಾಚಾರವೆಸಗಲು ಮುಂದಾದ ವ್ಯಕ್ತಿಯ ಮರ್ಮಾಂಗ ಕತ್ತರಿಸಿದ ಮಹಿಳೆ
ಉಳಿದಂತೆ ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಮುಂದುವರಿಯಲಿದೆ.
ಶನಿವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ ಹವಾಮಾನ ಇಲಾಖೆಯ ಅಂಕಿ- ಅಂಶದ ಪ್ರಕಾರ, ರಾಜ್ಯದಲ್ಲಿ ಒಣಹವೆ ಮುಂದುವರಿದ್ದು, ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇತ್ತು. ಕಲಬುರಗಿಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ಹಾಗೂ ದಾವಣಗೆರೆಯಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.