Advertisement

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

01:14 PM Dec 09, 2023 | Team Udayavani |

ವಿಜಯಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಏನು ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇಂಥ ವಿಷಯಗಳಲ್ಲಿ ಬಹಿರಂಗವಾಗಿ ಚರ್ಚಿಸದೆ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

Advertisement

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಅಪ್ಪಟ ಕಾಂಗ್ರೆಸ್ಸಿಗರಾದ ಬಿ.ಕೆ.ಹರಿಪ್ರಸಾದ್ ಬದ್ಧತೆಯನ್ನು ನಾವ್ಯಾರೂ ಪ್ರಶ್ನೆ ಮಾಡುವುದಿಲ್ಲ, ಪ್ರಶ್ನೆ ಮಾಡಲೂ ಅಗದು. ಅನೇಕ ಸಂದರ್ಭಗಳಲ್ಲಿ ಅವರು ಸಲಹೆ, ಸೂಚನೆ ಕೊಟ್ಟಿದ್ದಾರೆ. ಎಲ್ಲ ಸಮುದಾಯಗಳಿಗೂ ಅನುದಾನ ಕೊಡಿ ಎಂದು ಹೇಳಿರುತ್ತಾರೆ. ಹಿಂದುಳಿದ ಸಮುದಾಯಗಳ ನಾಯಕರಾದ ಅವರು ಜನರ ನೋವನ್ನು ಅರ್ಥೈಸಿಕೊಂಡವರು. ಹೀಗಾಗಿ ಎಲ್ಲರಿಗೂ ಅನುದಾನ ಕೊಡಿ ಎಂದು ಹೇಳಿರಬಹುದು, ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದರು.

ನೋಣವಿನಕೆರೆ ಸ್ವಾಮೀಗಳು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಲಿ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯ್ಯಲ್ಲಿರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ, ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ. ಅವರೆಲ್ಲ ವೀಕ್ಷಣೆ ಮಾಡಿ, ಶಾಸಕರ ಅಭಿಪ್ರಾಯ ಪಡೆದು, ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next