Advertisement

ಅಧಿಕಾರ ವಿಕೇಂದ್ರೀಕರಣ ಕಾಂಗ್ರೆಸ್‌ ಕೊಡುಗೆ

02:38 PM Jul 11, 2017 | |

ಚಿತ್ರದುರ್ಗ: ಕಾಂಗ್ರೆಸ್‌ ಪಕ್ಷದಲ್ಲಿ ಮಾತ್ರ ಎಲ್ಲ ಜಾತಿ, ಸಮುದಾಯದವರಿಗೂ ಅಧಿಕಾರ ನೀಡುವ ಪರಂಪರೆ ಇದೆ 
ಎಂದು ವಿಧಾನಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಹೇಳಿದರು.

Advertisement

ನಗರದ ಜಿಲ್ಲಾ ಕ್ರೀಡಾ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಜೀವ್‌ಗಾಂಧಿ  
ಪಂಚಾಯತ್‌ ರಾಜ್‌ ಸಂಘಟನೆಯ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಶೋಷಿತ ತಳ ಸಮುದಾಯಗಳನ್ನು
ಗುರುತಿಸಿ ಅಧಿಕಾರ ನೀಡುವುದಲ್ಲದೆ ನಾಯಕತ್ವವನ್ನು ಕಾಂಗ್ರೆಸ್‌ ಪಕ್ಷ ಹುಟ್ಟು ಹಾಕಿದೆ ಎಂದರು.

ಮಹಾತ್ಮಾ ಗಾಂಧೀಜಿಯವರ ಗ್ರಾಮಸ್ವರಾಜ್‌ ಕನಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಸು ಮಾಡಿದ್ದಾರೆ. ಕಾಂಗ್ರೆಸ್‌ ಆಡಳಿತದಿಂದಾಗಿ ದೇಶದಲ್ಲಿ ವಿಕೇಂದ್ರಿಕರಣ ವ್ಯವಸ್ಥೆ ಜಾರಿಗೆ ಬಂದಿದೆ. ಅದನ್ನು ಗಟ್ಟಿಗೊಳಿಸಲು ಪಕ್ಷ ಸಾಕಷ್ಟು ಕೆಲಸ ಮಾಡಿದೆ. ಆದರೆ ಸ್ಥಳೀಯ ಸಂಸ್ಥೆಗಳ ಅ ಧಿಕಾರವನ್ನು ಮೊಟಕು ಮಾಡಿರುವ ಬಿಜೆಪಿ ಪಕ್ಷಕ್ಕೆ ವಿಕೇಂದ್ರೀಕರಣದ ಬಗ್ಗೆ ಮಾತನಾಡುವ
ನೈತಿಕತೆ ಇಲ್ಲ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ವಿಕೇಂದ್ರೀಕರಣ ವ್ಯವಸ್ಥೆಯ ವಿರೋ ಧಿಯಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಜಿಪಂ, ತಾಪಂ, ಗ್ರಾಪಂ, ನಗರಸಭೆ, ಪಟ್ಟಣ ಪಂಚಾಯತ್‌ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಸಾಕಷ್ಟು ಅನುದಾನ ನೀಡಿದೆ ಎಂದರು. ಕಾಂಗ್ರೆಸ್‌ ಪಕ್ಷ ಗ್ರಾಮಸ್ವರಾಜ್‌ ಕಾರ್ಯಕ್ರಮದ ಮೂಲಕ ಗ್ರಾಮ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಉದ್ದೇಶ ಹೊಂದಿದೆ. ಈ ಕಾರ್ಯವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಬದ್ಧತೆಯಿಂದ ಮಾಡಬೇಕು ಎಂದು ಕರೆ ನೀಡಿದರು. 

ಸಂಸದ ಬಿ.ಎನ್‌. ಚಂದ್ರಪ್ಪ ಮಾತನಾಡಿ, ಕಾಂಗ್ರೆಸ್‌ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರ ಪಡೆಯೇ ಇದೆ. ಮುಂಬರುವ 
ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬೇರು ಮಟ್ಟದಿಂದ ಕೆಲಸ ಮಾಡಿ ಪಕ್ಷ ಕಟ್ಟಬೇಕು. ಪಕ್ಷ ಸಂಘಟನೆ ಸಂದರ್ಭದಲ್ಲಿ
ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯಬೇಕು ಎಂದು ಹೇಳಿದರು. ಕಾರ್ಯಾಗಾರದಲ್ಲಿ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌,
ಮಾಜಿ ಸಂಸದ ಸಿ. ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಫಾತ್ಯರಾಜನ್‌, ರಾಜೀವ್‌ ಗಾಂಧಿ  ಪಂಚಾಯತ್‌ರಾಜ್‌ ಸಂಘಟನಾ ಸಮಿತಿಯ ಜಿಲ್ಲಾಧ್ಯಕ್ಷ ಯು. ಲಕ್ಷ್ಮಿಕಾಂತ್‌, ಮುಖಂಡ ಹನುಮಲಿ ಷಣ್ಮುಖಪ್ಪ, ಜಿಪಂ ಸದಸ್ಯರಾದ ಪ್ರಕಾಶ್‌ ಮೂರ್ತಿ, ಶಶಿಕಲಾ ಸುರೇಶ್‌ಬಾಬು ಮೊದಲಾದವರು ಭಾಗವಹಿಸಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next