Advertisement

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

06:30 AM Dec 20, 2018 | Team Udayavani |

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿ ಬುಧವಾರ ಆರು ತಿಂಗಳು ಪೂರ್ತಿ ಯಾಗು ತ್ತಲೇ,ತಡ ರಾತ್ರಿಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಈ ಬಗೆಗಿನ ಆದೇಶಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಈಗಾಗಲೇ ಸಹಿ ಹಾಕಿದ್ದಾರೆ. ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವ ಬಗ್ಗೆ  ವರದಿ ಕಳುಹಿಸಿದ್ದರು.

Advertisement

ಅದಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆದಿದ್ದ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರವನ್ನೂ ಕೈಗೊಳ್ಳಲಾಗಿತ್ತು. ಇದರಿಂದಾಗಿ ಉಗ್ರರ ದಾಳಿಯಿಂದ ಕಂಗೆಟ್ಟಿರುವ ಕಣಿವೆ ರಾಜ್ಯದ ಎಲ್ಲಾ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಜೂನ್‌ನಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಪತನವಾದ ಬಳಿಕ ರಾಜ್ಯಪಾಲರ ಆಳ್ವಿಕೆ ಜಾರಿಗೊಳಿಸಲಾಗಿತ್ತು. ನ.21ರಂದು ಶಾಸಕರ ಖರೀದಿ ನಡೆಯುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಲೋಕಸಭೆ ಚುನಾವಣೆ ಜತೆಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಆ ರೀತಿ ನಡೆಯದೇ ಇದ್ದರೆ ಆಡಳಿತ ಮುಂದುವರಿಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next