Advertisement

ಭಾಷಣಕ್ಕೆ ಸಲಹೆ ಕೋರಿದ ಪ್ರಧಾನಿ

01:03 AM Jul 20, 2019 | Team Udayavani |

ನವದೆಹಲಿ: ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ಮೇಲಿನಿಂದ ಮಾಡಲಾಗುವ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯೂ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದಲೂ ಸಾರ್ವಜನಿಕರಿಂದ ವಿಷಯ ಸಂಗ್ರಹಿಸುವ ಅವರು ಅದನ್ನು ತಮ್ಮ ಭಾಷಣದಲ್ಲಿ ಸೇರಿಸಿಕೊಳ್ಳುತ್ತಾರೆ.

Advertisement

ಈ ಬಗ್ಗೆ ನಮೋ ಆ್ಯಪ್‌ನಲ್ಲಿ ಫೋರಂ ರಚಿಸಲಾಗಿದ್ದು, ಇದರಲ್ಲಿ ಜನರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಬಹುದು. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಆಗಸ್ಟ್‌ 15 ರಂದು ನನ್ನ ಭಾಷಣಕ್ಕೆ ನಿಮ್ಮ ಅಮೂಲ್ಯವಾದ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ನಾನು ವಿನಂತಿಸಿಕೊಳ್ಳುತ್ತೇನೆ. 130 ಕೋಟಿ ಜನರ ಧ್ವನಿಯು ಕೆಂಪುಕೋಟೆಯಲ್ಲಿ ಪ್ರತಿಧ್ವನಿಸಲಿ ಎಂದು ಟ್ವೀಟ್‌ನಲ್ಲಿ ಅವರು ಹೇಳಿದ್ದಾರೆ. ಎರಡನೇ ಬಾರಿಗೆ ಅಧಿಕಾರಕ್ಕೇರಿದ ನಂತರ ಸ್ವಾತಂತ್ರ್ಯ ದಿನದ ಮೊದಲ ಭಾಷಣವನ್ನು ಪ್ರಧಾನಿ ಮೋದಿ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next