Advertisement

ಐಟಿ ಉದ್ಯೋಗಿಗಳಿಂದ ಪ್ರಧಾನಿ ಕಾರ್ಯಕ್ರಮ ನೇರ ಪ್ರಸಾರ 

06:15 AM Feb 02, 2018 | |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಫೆ.4ರ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭವನ್ನು ನಗರದ ಸುಮಾರು 200 ಐಟಿ ಉದ್ಯೋಗಿಗಳು ಸಾಮಾಜಿಕ ಜಾಲತಾಣಗಳ ಮೂಲಕ ನೇರ ಪ್ರಸಾರ ಮಾಡಲಿದ್ದಾರೆ.

Advertisement

ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಸೇರಿಸುವುದರ ಜತೆಗೆ ಸಾಮಾಜಿಕ ಜಾಲ ತಾಣಗಳ ಮೂಲಕ ದೇಶಾದ್ಯಂತ ಇತರರಿಗೂ
ತಲುಪಿಸುವ ಉದ್ದೇಶದಿಂದ ಜಾಲ ತಾಣಗಳ ಮೂಲಕ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲು ಬಿಜೆಪಿ 200 ಐಟಿ
ಉದ್ಯೋಗಿಗಳನ್ನು ಆಯ್ಕೆ ಮಾಡಿಕೊಂಡಿದೆ. ಇದರೊಂದಿಗೆ ಬಿಜೆಪಿ ಮತ್ತು ಅದರ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ ನಿರ್ವಹಿಸುತ್ತಿರುವ ಸಾಮಾಜಿಕ ಜಾಲ ತಾಣಗಳಲ್ಲೂ ಕಾರ್ಯಕ್ರಮ ನೇರ ಪ್ರಸಾರವಾಗುತ್ತದೆ.

ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕುರಿತು ಇತ್ತೀಚೆಗೆ ಬಿಜೆಪಿ ಐಟಿ ಉದ್ಯೋಗಿಗಳ ಆನ್‌ಲೈನ್‌ ನೋಂದಣಿ ಕಾರ್ಯ ಮಾಡಿದ್ದು,12,500ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ ಮತ್ತು ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ.

ಪ್ರತ್ಯೇಕ ವ್ಯವಸ್ಥೆ: ಪ್ರಧಾನಿ ಕಾರ್ಯಕ್ರಮವನ್ನು ಸಾಮಾಜಿಕ ಜಾಲ ತಾಣಗಳ ಮೂಲಕ ನೇರ ಪ್ರಸಾರ ಮಾಡುವವರಿಗೆ ಚಿತ್ರೀಕರಣಕ್ಕೆ ಅನುಕೂಲವಾಗುವಂತೆ ಕುಳಿತುಕೊಳ್ಳಲು ನೇರ ವ್ಯವಸ್ಥೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next