Advertisement

ಅಂಗನವಾಡಿ ಮೂಲಸೌಕರ್ಯಕ್ಕೆ ಸಮನ್ವಯ ತತ್ವ

07:42 AM Dec 26, 2018 | |

ಬೆಂಗಳೂರು: ಪರಸ್ಪರ ಸಮನ್ವಯ-ಸಹಕಾರ ತತ್ವದಡಿ ಗ್ರಾಮೀಣ ಪ್ರದೇಶದ ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಮೊರೆ ಹೋಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೂಲಸೌಕರ್ಯ  ಸಮಸ್ಯೆ ಎದುರಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಕಟ್ಟಡ ನಿರ್ಮಾಣಕ್ಕೆ ಜಾಗ, ಶೌಚಾಲಯ ನಿರ್ಮಾಣ, ಆಟಿಕೆ ಸಾಮಾನು ಇತ್ಯಾದಿ ಒದಗಿಸಲು ಕೈ ಜೋಡಿಸುವಂತೆ ಸಹಾಯ ಕೋರಿದೆ.

Advertisement

ಹೀಗಾಗಿ, ಗ್ರಾಮೀಣ ಪ್ರದೇಶಗಳಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಸೂಕ್ತ ಜಾಗ ಒದಗಿಸಲು, ಶೌಚಾಲಯ ನಿರ್ಮಾಣ, ಅಂಗನವಾಡಿ ಕೇಂದ್ರಗಳ ದುರಸ್ಥಿ, ಕಟ್ಟಡಕ್ಕೆ ಸುಣ್ಣ-ಬಣ್ಣ ಬಳಿಯುವುದು, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್‌ ಮತ್ತು ಫ್ಯಾನ್‌ ಸೌಲಭ್ಯ ಹಾಗೂ ಆಟಿಕೆ ಸಾಮಾಗ್ರಿಗಳನ್ನು ಒದಗಿಸಲು ಸಂಬಂಧಪಟ್ಟ ಗ್ರಾಪಂನೊಂದಿಗೆ ಸಮನ್ವಯತೆ ಸಾಧಿಸಲು ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಯೋಗದಿಗೆ ಕೆಲಸ ಮಾಡಲು ಎಲ್ಲ ಜಿಲ್ಲಾ ಉಪ ನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೂಚಿಸಿದೆ.

ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಲಭ್ಯಗಳನ್ನು ಉತ್ತಮ ಪಡಿಸುವ ಬಗ್ಗೆ ಇತ್ತೀಚೆಗೆ ಸಂಬಂಧಪಟ್ಟ ಇಲಾಖೆಯೊಂದಿಗೆ ನಡೆದ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸೂಚಿಸಿದ್ದರು. ಅದರಂತೆ ಗ್ರಾಮೀಣ ಭಾಗದ ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ.

ರಾಜ್ಯದ ಸುಮಾರು 65 ಸಾವಿರ ಅಂಗನವಾಡಿ ಕೇಂದ್ರಗಳ ಮೂಲಕ “ಸಮಗ್ರ ಶಿಶು ಅಭಿವೃದ್ಧಿ ಯೋಜನೆ’ (ಐಸಿಡಿಎಸ್‌) ಜಾರಿಗೊಳಿಸಲಾಗುತ್ತಿದೆ. ಇದರಡಿ ವಿವಿಧ 200ಕ್ಕೂ ಹೆಚ್ಚು ಶಿಶು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು,
ಅಂಗನವಾಡಿ ಕೇಂದ್ರಗಳಲ್ಲಿ ಪೂರಕ ಪೌಷ್ಠಿಕ ಆಹಾರ, ಚುಚ್ಚುಮದ್ದು, ಆರೋಗ್ಯ ತಪಾಸಣೆ, ಮಾಹಿತಿ ಸೇವೆ, ಶಾಲಾಪೂರ್ವ ಶಿಕ್ಷಣ, ಪೌಷ್ಠಿಕತೆ ಮತ್ತು ಆರೋಗ್ಯ ಶಿಕ್ಷಣ ಸೇವೆಗಳನ್ನು 6 ವರ್ಷದೊಳಗಿನ ಮಕ್ಕಳು, ಗರ್ಭೀಣಿಯರು ಮತ್ತು ಬಾಣಂತಿಯರಿಗೆ ಒದಗಿಸ
ಲಾಗುತ್ತಿದೆ. ಸುಮಾರು 55 ಲಕ್ಷ ಫ‌ಲಾನು ಭವಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, ಅನೇಕ ಅಂಗನವಾಡಿ ಕೇಂದ್ರಗಳು ಮೂಲಸೌರ್ಯಕಗಳ ಕೊರತೆ ಎದುರಿಸುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಇತ್ತಿಚಿನ ಅಂಕಿ-ಅಂಶಗಳ ಪ್ರಕಾರ ಒಟ್ಟು 65 ಸಾವಿರ ಅಂಗನ ವಾಡಿ ಕೇಂದ್ರಗಳ ಪೈಕಿ 41 ಸಾವಿರ ಅಂಗನವಾಡಿ ಕೇಂದ್ರಗಳು ಮಾತ್ರ ಸ್ವಂತ ಕಟ್ಟಡ ಹೊಂದಿವೆ. 10 ಸಾವಿರ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಅನೇಕ ಕಡೆ ಶೌಚಾಲಯು, ಕುಡಿಯುವ ನೀರು, ವಿದ್ಯುತ್‌ ಪೂರೈಕೆ ಸಮಸ್ಯೆ ಇದೆ. ಇದಲ್ಲದೆ ಮಕ್ಕಳಿಗೆ ಪೂರಕ ವಾತಾವರಣ ಇಲ್ಲ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಈ ಹಿನ್ನೆಲೆ ಯಲ್ಲಿ ಮೂಲಸೌಕರ್ಯಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಎರಡೂ ಇಲಾಖೆಗಳು ಮುಂದಾಗಿವೆ.

ಜಂಟಿ ಸುತ್ತೋಲೆ: ಗ್ರಾಮೀಣ ಪ್ರದೇಶಗಳ ಅಂಗನವಾಡಿ ಕೇಂದ್ರಗಳಿಗೆ ಅವಶ್ಯವಿರುವ ಮೂಲಸೌಕರ್ಯಗಳ ಪಟ್ಟಿ ಮಾಡಿ ಸಂಬಂಧಪಟ್ಟ ಗ್ರಾಪಂಗಳಿಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು. ಅದೇ ರೀತಿ ಸಂಬಂಧಪಟ್ಟ ಗ್ರಾಪಂಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಸೂಕ್ತ ಜಾಗ ಒದಗಿಸಲು, ಶೌಚಾಲಯ ನಿರ್ಮಾಣ, ಅಂಗನವಾಡಿ ಕೇಂದ್ರಗಳ ದುರಸ್ಥಿ, ಕಟ್ಟ
ಡಕ್ಕೆ ಸುಣ್ಣ-ಬಣ್ಣ ಬಳಿಯುವುದು, ವಿದ್ಯುತ್‌ ಮತ್ತು ಫ್ಯಾನ್‌ ಸೌಲಭ್ಯ, ಆಟಿಕೆ ಸಾಮಾಗ್ರಿಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಜಂಟಿ ಸುತ್ತೋಲೆ ಹೊರಡಿಸಿದೆ.

Advertisement

ಅವಶ್ಯವಿರುವ ಕಡೆ ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವಂತೆ ಗ್ರಾಪಂಗಳಿಗೆ ಸೂಚಿಸಲಾಗಿದೆ. ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಗ್ರಾಪಂಗಳಲ್ಲಿ ಹೆಚ್ಚು ಸಮಸ್ಯೆ ಅನಿಸುವುದಿಲ್ಲ. ಅನೇಕ ಗ್ರಾಪಂಗಳಿಂದ ಇದಕ್ಕೆ ಉತ್ತಮ ಸ್ಪಂದನೆ
ಸಿಗುತ್ತಿದೆ. ಮೂಲಸೌಕರ್ಯ ಒದಗಿಸಲು ಉದ್ಯೋಗ ಖಾತರಿ ಯೋಜನೆ ಬಳಸಿಕೊಳ್ಳಲು ಒತ್ತು ನೀಡಲಾಗುತ್ತಿದೆ.

 ●ಎಂ.ಕೆ. ಕೆಂಪೇಗೌಡ ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಇಲಾಖೆ

ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು ಎರಡೂ ಇಲಾಖೆಗಳು ಪರಸ್ಪರ ಸಮನ್ವಯಕ್ಕೆ ಬಂದಿರುವುದು ಒಳ್ಳೆಯ ಬೆಳವಣಿಗೆ. ಮೂಲಸೌಕರ್ಯ ಒದಗಿಸಿದ ಮಾತ್ರಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಂಗನವಾಡಿಗಳ ಮೇಲೆ ಸವಾರಿ
ಮಾಡುವಂತಾಗಬಾರದು. ಸಂಸದರ ನಿಧಿ, ಶಾಸಕರ ಅನುದಾನ ಬಳಕೆಗೂ ಒತ್ತು ಕೊಡಬೇಕು.

 ● ಎಸ್‌. ವರಲಕ್ಷ್ಮೀ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ

 ●ರಫಿಕ್‌ ಅಹ್ಮದ್‌

Advertisement

Udayavani is now on Telegram. Click here to join our channel and stay updated with the latest news.

Next